ADVERTISEMENT

ಏಳನೆ ದಿನದತ್ತ ರೈತರ ಸರದಿ ಉಪವಾಸ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2024, 14:47 IST
Last Updated 8 ಅಕ್ಟೋಬರ್ 2024, 14:47 IST
ನರಗುಂದದಲ್ಲಿ ಹುತಾತ್ಮ ರೈತ ವೀರಪ್ಪ ಕಡ್ಲಿಕೊಪ್ಪ ಅವರ ವೀರಗಲ್ಲಿನ ಅಭಿವೃದ್ಧಿ ಹಾಗೂ ಸ್ಮಾರಕ ನಿರ್ಮಾಣಕ್ಕೆ ಆಗ್ರಹಿಸಿ ಕರ್ನಾಟಕ ರೈತ ಸಂಘಟನೆಗಳ ಮಹಾ ಒಕ್ಕೂಟ ಹಾಗೂ ಮಹದಾಯಿ ಕಳಸಾ ಬಂಡೂರಿ ಹೋರಾಟ ಸಮಿತಿ ಸದಸ್ಯರು ತಹಶೀಲ್ದಾರ್‌ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು
ನರಗುಂದದಲ್ಲಿ ಹುತಾತ್ಮ ರೈತ ವೀರಪ್ಪ ಕಡ್ಲಿಕೊಪ್ಪ ಅವರ ವೀರಗಲ್ಲಿನ ಅಭಿವೃದ್ಧಿ ಹಾಗೂ ಸ್ಮಾರಕ ನಿರ್ಮಾಣಕ್ಕೆ ಆಗ್ರಹಿಸಿ ಕರ್ನಾಟಕ ರೈತ ಸಂಘಟನೆಗಳ ಮಹಾ ಒಕ್ಕೂಟ ಹಾಗೂ ಮಹದಾಯಿ ಕಳಸಾ ಬಂಡೂರಿ ಹೋರಾಟ ಸಮಿತಿ ಸದಸ್ಯರು ತಹಶೀಲ್ದಾರ್‌ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು   

ನರಗುಂದ: ಹುತಾತ್ಮ ರೈತ ವೀರಪ್ಪ ಕಡ್ಲಿಕೊಪ್ಪ ಅವರ ವೀರಗಲ್ಲಿನ ಅಭಿವೃದ್ಧಿ ಹಾಗೂ ಸ್ಮಾರಕ ನಿರ್ಮಾಣಕ್ಕೆ ಆಗ್ರಹಿಸಿ ಕರ್ನಾಟಕ ರೈತ ಸಂಘಟನೆಗಳ ಮಹಾ ಒಕ್ಕೂಟ ಹಾಗೂ ಮಹದಾಯಿ ಕಳಸಾ ಬಂಡೂರಿ ಹೋರಾಟ ಸಮಿತಿ ಸದಸ್ಯರು ವೀರಗಲ್ಲಿನ ಬಳಿ ಆರಂಭಿಸಿದ ನಿರಂತರ ಸರದಿ ಉಪವಾಸ ಸತ್ಯಾಗ್ರಹ ಮಂಗಳವಾರ ಏಳನೇ ದಿನ ಪೂರೈಸಿತು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ತಾಲ್ಲೂಕು ಮುಖಂಡ ವಿಠ್ಠಲ ಜಾಧವ, ರೈತರ ಆಶಯಗಳಿಗೆ ಸ್ಪಂದಿಸದ ಸರ್ಕಾರಗಳು ಇದ್ದು ಸತ್ತಂತೆ. ಮಲಪ್ರಭಾ ಅಚ್ಚುಕಟ್ಟ ಪ್ರದೇಶದ ರೈತರು ಒಂದಿಲ್ಲೊಂದು ಹಂತದಲ್ಲಿ ತಮ್ಮ ಬೇಡಿಕೆಗಳಿಗಾಗಿ ನಿರಂತರ ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಆದರೂ ಸರ್ಕಾರಗಳು ಸ್ಪಂದಿಸುತ್ತಿಲ್ಲ. ಅದಕ್ಕಾಗಿ ಮಹದಾಯಿ ಸಲುವಾಗಿ ನಮ್ಮ ಹೋರಾಟ ಕೊನೆಗಾಣಿಸಬೇಕು. ಇಲ್ಲವೇ ಮಹದಾಯಿ ಮಲಪ್ರಭೆಗೆ ಕೂಡಿಸಬೇಕು ಎಂದು ಆಗ್ರಹಿಸಿದರು.

ರೈತ ಹುತಾತ್ಮ ಸ್ಮಾರಕ ನಿರ್ಮಾಣಕ್ಕೆ ಉತ್ತರ ಕರ್ನಾಟಕದ ಎಲ್ಲ ಸಂಸದರು, ಶಾಸಕರು, ಸಚಿವರು ಪ್ರಾಮಾಣಿಕ ಪ್ರಯತ್ನ ಮಾಡುವುದು ಅಗತ್ಯವಿದೆ ಎಂದರು.

ADVERTISEMENT

ಸತ್ಯಾಗ್ರಹಲ್ಲಿ ಒಕ್ಕೂಟದ ಸಂಚಾಲಕ ಶಂಕರ ಅಂಬಲಿ, ಬಸವರಾಜ ಸಾಬಳೆ, ಚನ್ನು ನಂದಿ,ನಬೀಸಾಬ ಕಿಲ್ಲೆದಾರ, ವಿ.ಎಸ್.ಸೊಪ್ಪಿನ ಹಾಗೂ ಕರ್ನಾಟಕ ರೈತ ಸಂಘಟನೆಗಳ ಮಹಾ ಒಕ್ಕೂಟದ ಸದಸ್ಯರು, ಕರವೇ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.