‘ಕಡಲೆ ಖರೀದಿಸಿ ಬಾಕಿ ಹಣ ₹6.50 ಕೋಟಿ ಕೊಡದೇ ವಂಚಿಸಿದವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಆರೋಪಿಸಿ ಗದಗ ಮತ್ತು ಮುಂಡರಗಿ ತಾಲ್ಲೂಕಿನ ರೈತರು ಜಿಲ್ಲಾಡಳಿತ ಭವನದ ಎದುರು ಬುಧವಾರ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದ ವೇಳೆ ಇಬ್ಬರು ರೈತ ಮಹಿಳೆಯರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು.
ಗದಗ: ‘ಕಡಲೆ ಖರೀದಿಸಿ ಬಾಕಿ ಹಣ ₹6.50 ಕೋಟಿ ಕೊಡದೇ ವಂಚಿಸಿದವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಆರೋಪಿಸಿ ಗದಗ ಮತ್ತು ಮುಂಡರಗಿ ತಾಲ್ಲೂಕಿನ ರೈತರು ಜಿಲ್ಲಾಡಳಿತ ಭವನದ ಎದುರು ಬುಧವಾರ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದ ವೇಳೆ ಇಬ್ಬರು ರೈತ ಮಹಿಳೆಯರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು.
ರೈತ ಮಹಿಳೆಯರಾದ ಸರಸ್ವತಿ ದಾಸರ ಹಾಗೂ ಗೀತಾ ಬಾಲಪ್ಪನವರ ಅವರು ವಿಷ ಸೇವಿಸಿದ ಕೂಡಲೇ ಅಸ್ವಸ್ಥಗೊಂಡರು. ಇದರಿಂದ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅವರನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು.
‘ಜಿಲ್ಲಾ ಆಸ್ಪತ್ರೆಯಲ್ಲಿ ಇಬ್ಬರಿಗೂ ಚಿಕಿತ್ಸೆ ಮುಂದುವರೆದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.