ADVERTISEMENT

ಲಕ್ಷ್ಮೇಶ್ವರ: ಮೆಣಸಿನಕಾಯಿ ಕಳ್ಳರನ್ನು ಕಂಬಕ್ಕೆ ಕಟ್ಟಿ ಥಳಿಸಿದ ರೈತರು

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2023, 16:24 IST
Last Updated 26 ನವೆಂಬರ್ 2023, 16:24 IST
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲ್ಲೂಕಿನ ಯತ್ತಿನಹಳ್ಳಿ ಗ್ರಾಮದಲ್ಲಿ ಮೆಣಸಿನಕಾಯಿ ಕಳ್ಳತನ ಮಾಡಿ ಸಿಕ್ಕಿ ಬಿದ್ದ ಇಬ್ಬರು ಕಳ್ಳರನ್ನು ಗ್ರಾಮಸ್ಥರು ಭಾನುವಾರ ದೇವಸ್ಥಾನದ ಕಂಬಕ್ಕೆ ಕಟ್ಟಿ ಹಾಕಲಾಯಿತು
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲ್ಲೂಕಿನ ಯತ್ತಿನಹಳ್ಳಿ ಗ್ರಾಮದಲ್ಲಿ ಮೆಣಸಿನಕಾಯಿ ಕಳ್ಳತನ ಮಾಡಿ ಸಿಕ್ಕಿ ಬಿದ್ದ ಇಬ್ಬರು ಕಳ್ಳರನ್ನು ಗ್ರಾಮಸ್ಥರು ಭಾನುವಾರ ದೇವಸ್ಥಾನದ ಕಂಬಕ್ಕೆ ಕಟ್ಟಿ ಹಾಕಲಾಯಿತು   

ಲಕ್ಷ್ಮೇಶ್ವರ (ಗದಗ ಜಿಲ್ಲೆ): ತಾಲ್ಲೂಕಿನ ಯತ್ತಿನಹಳ್ಳಿ ಗ್ರಾಮದಲ್ಲಿ ಮೆಣಸಿನಕಾಯಿ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನು ದೇವಸ್ಥಾನದ ಕಂಬಕ್ಕೆ  ಭಾನುವಾರ ಕಟ್ಟಿ ಹಾಕಿದ ರೈತರು ಅವರನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಈ ವರ್ಷ ಮಳೆ ಇಲ್ಲದೇ ಮೆಣಸಿನಕಾಯಿ ಸರಿಯಾಗಿ ಬೆಳೆದಿಲ್ಲ. ಇಂಥ ಸಂದರ್ಭದಲ್ಲಿ ಬಂದಷ್ಟು ಫಸಲನ್ನು ಕಳ್ಳರು ಕದಿಯುತ್ತಿರುವುದನ್ನು ಕಂಡು ರೈತರು ರೊಚ್ಚಿಗೆದ್ದರು.

‘ಗ್ರಾಮದ ನಿವಾಸಿಗಳಾದ ಶಿವು ಮತ್ತು ಮಂಜುನಾಥ ಎಂಬವರು ರೈತರ ಹೊಲದಲ್ಲಿ ಬೆಳೆದಿರುವ ಮೆಣಸಿನಕಾಯಿ ಕದಿಯುತ್ತಿದ್ದರು’ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ADVERTISEMENT

ಕಳ್ಳರನ್ನು ಸಾಕ್ಷ್ಯ ಸಮೇತ ಹಿಡಿದ ರೈತರು ಅವರ ತಲೆ ಮೇಲೆ ಕಳ್ಳತನ ಮಾಡಿದ್ದ ಮೆಣಸಿನಕಾಯಿ ಗಂಟನ್ನು ಹೊರಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದರು. ಇದರ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.