ADVERTISEMENT

ಬೇಡಿಕೆ ಈಡೇರಿಸುವವರೆಗೂ ನಿರಂತರ ಹೋರಾಟ

ರೈತ ಸೇನಾ ಸಂಘಟನೆ ರಾಜ್ಯ ಘಟಕ ಅಧ್ಯಕ್ಷ ವಿರೇಶ ಸೊಬರದಮಠ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2025, 2:50 IST
Last Updated 24 ಡಿಸೆಂಬರ್ 2025, 2:50 IST
ನರಗುಂದದ ಕಳಸಾಬಂಡೂರಿ, ಮಹದಾಯಿ ನಿರಂತರ ಧರಣಿ ವೇದಿಕೆಯಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ರೈತ ದಿನಾಚರಣೆಯಲ್ಲಿ ರೈತರ ಬೇಡಿಕೆಗಳಿಗೆ ಆಗ್ರಹಿಸಿ ತಹಶೀಲ್ದಾರ್ ಶ್ರೀಶೈಲ ತಳವಾರ ಅವರಿಗೆ ಮನವಿ ಸಲ್ಲಿಸಲಾಯಿತು
ನರಗುಂದದ ಕಳಸಾಬಂಡೂರಿ, ಮಹದಾಯಿ ನಿರಂತರ ಧರಣಿ ವೇದಿಕೆಯಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ರೈತ ದಿನಾಚರಣೆಯಲ್ಲಿ ರೈತರ ಬೇಡಿಕೆಗಳಿಗೆ ಆಗ್ರಹಿಸಿ ತಹಶೀಲ್ದಾರ್ ಶ್ರೀಶೈಲ ತಳವಾರ ಅವರಿಗೆ ಮನವಿ ಸಲ್ಲಿಸಲಾಯಿತು   

ನರಗುಂದ: ‘ರಾಜ್ಯದಲ್ಲಿ ರೈತ ಸಮುದಾಯ ಹಲವು ಸಮಸ್ಯೆ ಎದುರಿಸುತ್ತಿದೆ. ಮಹದಾಯಿ ಸೇರಿದಂತೆ ಅನೇಕ ಸಮಸ್ಯೆಗಳನ್ನು ಸರ್ಕಾರ ಈಡೇರಿಸುವವರೆಗೂ ನಿರಂತರ ಹೋರಾಟ ನಡೆಸಲಾಗುವುದು’ ಎಂದು ರೈತ ಸೇನಾ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷ ವಿರೇಶ ಸೊಬರದಮಠ ಹೇಳಿದರು.

ಪಟ್ಟಣದ ಕಳಸಾಬಂಡೂರಿ, ಮಹದಾಯಿ ಧರಣಿ ವೇದಿಕೆಯಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ರೈತ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ರೈತರ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಸರ್ಕಾರ ಖರೀದಿ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ ನೀಡಿದ ಆದೇಶ ಲೆಕ್ಕಿಸದ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ’ ಎಂದು ಆರೋಪಿಸಿದರು.

‘ಸರ್ಕಾರ ಪ್ರತಿ ತಾಲ್ಲೂಕಿನಲ್ಲಿ 10 ಖರೀದಿ ಕೇಂದ್ರ ಆರಂಭಿಸಿ ಖರೀದಿ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ಅಹೋರಾತ್ರಿ ಧರಣಿ ಆರಂಭಿಸಲಾಗುವುದು’ ಎಂದು ಎಚ್ಚರಿಸಿದರು.

ADVERTISEMENT

ಶಿವಪ್ಪ ಹೊರಕೇರಿ, ಗುರು ರಾಮನಗೌಡ್ರ, ಮಹೇಶ ಕಿರೇಸೂರ, ಮಾಯಪ್ಟ ಒಡಕನವರ, ಗಿರಿಯಪ್ಪ ಹೊಟ್ಟಿ, ಗುರು ಚಿಂಚನಸೂರ, ಶಿವಪ್ಪ ಸಾತಣ್ಣವರ, ತಿಪ್ಪಣ್ಣ ಮೇಟಿ, ಮುತ್ತು ಪಾಟೀಲ, ಹನಮಂತ ಸರನಾಯ್ಕರ, ವೀರಭಸಪ್ಟ ಹೂಗಾರ, ಎಸ್.ಬಿ. ಜೋಗಣ್ಣವರ, ಪರಶುರಾಮ ಜಂಬಗಿ, ಸುಭಾಸ ಗಿರಿಯಣ್ಣವರ, ಶರಣಗೌಡ ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.