ಮುಂಡರಗಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸಂಪೂರ್ಣವಾಗಿ ಸುಟ್ಟು ಹೋಗಿರುವ ಬೇಕರಿ ಸಾಮಗ್ರಿಗಳನ್ನು ಪೌರಕಾರ್ಮಿಕರು ತೆರವುಗೊಳಿಸಿದರು
ಮುಂಡರಗಿ: ಬೆಂಕಿ ಅವಘಡದಲ್ಲಿ ಬೇಕರಿಯೊಂದು ಸಂಪೂರ್ಣ ಭಸ್ಮವಾಗಿರುವ ಘಟನೆ ಪಟ್ಟಣದ ಕೇಂದ್ರ ಬಸ್ ನಿಲ್ದಾಣದ ಬಳಿ ಶನಿವಾರ ಬೆಳಗಿನ ಜಾವ ಸಂಭವಿಸಿದೆ.
ಪಟ್ಟಣದ ಗಣ್ಯ ಬೇಕರಿ ವ್ಯಾಪಾರಿ ಮಹಾಂತೇಶ ನಾವಿ ಅವರಿಗೆ ಸೇರಿದ್ದು, ಅವಗಢದಲ್ಲಿ ಎರಡು ಪ್ರಿಜ್ ಸೇರಿದಂತೆ ಸುಮಾರು ₹ 25ಲಕ್ಷ ಮೌಲ್ಯದ ಪೀಠೋಪಕರಣಗಳು ಹಾಗೂ ಬೇಕರಿ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಶನಿವಾರ ಬೆಳಗಿನ ಜಾವ ಬೀಸಿದ ಗಾಳಿಯಿಂದಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ತಗುಲಿರಬಹುದು ಎಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸಾರ್ವಜನಿಕರ ನೆರವಿನಿಂದ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಅಷ್ಟರೊಳಗೆ ಭಾಗಶಃ ಬೇಕರಿಯು ಭಸ್ಮವಾಗಿ ಹೋಗಿತ್ತು. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಎರ್ರಿಸ್ವಾಮಿ ಪಿ.ಎಸ್., ಸಿಪಿಐ ಮಂಜುನಾಥ ಕುಸುಗಲ್ಲ ಹಾಗೂ ಮತ್ತಿತರ ಅಧಿಕಾರಿಗಳು ಹಾಗೂ ಪುರಸಭೆಯ ಸದಸ್ಯರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.