ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿ ಆಗಲು ಯತ್ನಿಸಿದ ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ, ಬಂಧಿಸಿದ್ದಾರೆ.
ಗದಗ ತಾಲ್ಲೂಕಿನ ಲಕ್ಕುಂಡಿ ಕಣಗಿನಹಾಳ ರಸ್ತೆಯಲ್ಲಿ ಗುರುವಾರ ಬೆಳಿಗ್ಗೆ ಘಟನೆ ನಡೆದಿದೆ.
ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಸಂಜಯ್ ಕೊಪ್ಪದ ಎಂಬಾತನನ್ನು ಪೊಲೀಸರು ಸ್ಥಳ ಮಹಜರಿಗೆ ಕರೆತಂದಿದ್ದರು. ಈ ವೇಳೆ ಸಂಜಯ್ ಪೊಲೀಸರ ಮೇಲೆ ಕಲ್ಲು ಎಸೆದು ಪರಾರಿ ಆಗಲು ಯತ್ನಿಸಿದ್ದ. ಆಗ ಪಿಎಸ್‌ಐ ಸಂಗಮೇಶ ಶಿವಯೋಗಿ ಆತ್ಮರಕ್ಷಣೆಗಾಗಿ ಸಂಜಯ್ ಕಾಲಿಗೆ ಗುಂಡು ಹಾರಿಸಿದ್ದಾರೆ.
ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಪ್ರಕಾಶ್ ಗಾಣಿಗೇರ ಅವರ ಕೈ, ಕಾಲಿಗೆ ಗಾಯಗಳಾಗಿವೆ.
ಆರೋಪಿ ಸಂಜಯ್ ಕೊಪ್ಪದ ವಿರುದ್ಧ ರಾಬರಿ, ಕೊಲೆಯತ್ನಕ್ಕೆ ಸಂಬಂಧಿಸಿದಂತೆ ಒಟ್ಟು 12 ಪ್ರಕರಣಗಳು ದಾಖಲಾಗಿವೆ.
ಗಾಯಗೊಂಡಿರುವ ಆರೋಪಿ ಸಂಜಯ್ ಹಾಗೂ ಕಾನ್‌ಸ್ಟೆಬಲ್ ಪ್ರಕಾಶ್ ಅವರಿಗೆ ಗದಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.