ADVERTISEMENT

ಹಿಜಾಬ್‌ ಧರಿಸಿದ್ದವರಿಗೆ ಅವಕಾಶ: 5 ಶಿಕ್ಷಕರು, ಇಬ್ಬರು ಮುಖ್ಯ ಅಧೀಕ್ಷಕರು ಅಮಾನತು

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2022, 15:35 IST
Last Updated 29 ಮಾರ್ಚ್ 2022, 15:35 IST
   

ಗದಗ: ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಕೊಠಡಿ ಪ್ರವೇಶಿಸಲು ಅವಕಾಶ ನೀಡಿದ್ದ ಶಿಕ್ಷಕರು ಹಾಗೂ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರನ್ನು ಮಂಗಳವಾರ ಅಮಾನತು ಮಾಡಿ ಆದೇಶಿಸಲಾಗಿದೆ.

‘ನ್ಯಾಯಾಲಯದ ತೀರ್ಪು ಉಲ್ಲಂಘಿಸಿ ವಿದ್ಯಾರ್ಥಿಗಳು ಹಿಜಾಬ್‌ ಧರಿಸಿ ಕೊಠಡಿ ಒಳಗೆ ಬರಲು ಅವಕಾಶ ನೀಡಿದ ಗದುಗಿನ ಸಿ.ಎಸ್‌.ಪಾಟೀಲ ಬಾಲಕರ ಪ್ರೌಢಶಾಲೆ ಹಾಗೂ ಸಿ.ಎಸ್‌.ಪಾಟೀಲ ಬಾಲಕಿಯರ ಪ್ರೌಢಶಾಲೆ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕರಾದ ಎಸ್‌.ಯು.ಹೊಕ್ಕಳದ, ಎಸ್‌.ಎಂ.ಪತ್ತಾರ ಎಸ್‌.ಜಿ.ಗೋಡಕೆ, ಎಸ್‌.ಎಸ್‌.ಗುಜಮಾಗಡಿ, ವಿ.ಎನ್‌.ಕಿವುಡರ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಗದಗ ಡಿಡಿಪಿಐ ಬಸವಲಿಂಗಪ್ಪ ಜಿ.ಎಂ. ತಿಳಿಸಿದ್ದಾರೆ.

ಈ ಎರಡೂ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಬಿ.ಭಜಂತ್ರಿ ಮತ್ತು ಬಿ.ಎಸ್‌.ಹೊನಗುಡಿ ಅವರನ್ನು ಸಹ ಅಮಾನತು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.