ಪ್ರಾತಿನಿಧಿಕ ಚಿತ್ರ
ರೋಣ (ಗದಗ ಜಿಲ್ಲೆ): ತಾಲ್ಲೂಕಿನ ಯಾ.ಸ.ಹಡಗಲಿ– ಕೌಜಗೇರಿ ಮಧ್ಯೆಯಿರುವ ಇರುವೆಹಳ್ಳವನ್ನು ದಾಟುವಾಗ ಮಂಗಳವಾರ ಕೊಚ್ಚಿ ಹೋಗುತ್ತಿದ್ದ ಮೂವರು ಆರೋಗ್ಯ ಇಲಾಖೆ ಸಿಬ್ಬಂದಿ ಪೈಕಿ ಇಬ್ಬರನ್ನು ರಕ್ಷಿಸಲಾಗಿದೆ. ಒಬ್ಬರಿಗಾಗಿ ಶೋಧ ಮುಂದುವರೆದಿದೆ.
‘ಬೆಳವಣಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳಾದ ಬಸವರಾಜ ಕಡಪಟ್ಟಿ ಮತ್ತು ವೀರಸಂಗಯ್ಯ ಹಿರೇಮಠ ಅವರನ್ನು ರಕ್ಷಿಸಲಾಗಿದೆ. ಆರೋಗ್ಯ ಸಹಾಯಕಿ ಬಸಮ್ಮ ಗುರಿಕಾರ ಅವರಿಗಾಗಿ ಶೋಧ ನಡೆಸಿದ್ದೇವೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಗ್ರಾಮದಲ್ಲಿ ಆರೋಗ್ಯ ಮೇಳ ಕಾರ್ಯಕ್ರಮ ಮುಗಿಸಿಕೊಂಡು ಮೂವರು ಒಂದೇ ಬೈಕ್‌ನಲ್ಲಿ ಮರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ’ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.