ನರಗುಂದ (ಗದಗ ಜಿಲ್ಲೆ): ಕೆಎಸ್ಆರ್‌ಟಿಸಿ ಬಸ್ ಹಾಗೂ ಆಲ್ಟೊ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ಕು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ಬೆಳಿಗ್ಗೆ 6.30ರ ಸುಮಾರಿಗೆ ನಡೆದಿದೆ.
ಸಾರಿಗೆ ಬಸ್ ಕುಳಗೇರಿಯಿಂದ ಹುಬ್ಬಳ್ಳಿಯತ್ತ ತೆರಳುತ್ತಿತ್ತು. ಕಾರು ಹುಬ್ಬಳ್ಳಿಯಿಂದ ಕೊಣ್ಣೂರ ಕಡೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ.
ಕಾರಿನಲ್ಲಿ ದ್ದ ನಾಲ್ಕು ಜನ ಹಾವೇರಿ ಜಿಲ್ಲೆಯವರಾಗಿದ್ದು ರುದ್ರಪ್ಪ , ಮಗ ವಿಜಯಕುಮಾರ್, ಹೆಂಡತಿ ರಾಜೇಶ್ವರಿ, ಮಗಳು ಐಶ್ವರ್ಯ ಎಂದು ಸಿಪಿಐ ಮಂಜುನಾಥ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.