ರೋಣ: ಇಲ್ಲಿನ ಪುರಸಭೆಯ ಆವರಣದಲ್ಲಿ ಎಸ್.ಸಿ.ಪಿ., ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಎಂಟು ಪಟ್ಟಣದ ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣಾ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ರೋಣ ತಾಲ್ಲೂಕು ಉಚಿತ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಮಿಥುನ ಪಾಟೀಲ, ಹೊಗೆರಹಿತ ಅಡುಗೆ ಮನೆ ಪರಿಕಲ್ಪನೆ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣೆ ಮಾಡಲು ಸರ್ಕಾರ ಯೋಜನೆ ಮಾಡಿದೆ. ಈ ಯೋಜನೆಯಡಿ ರೋಣ ನಗರದ ಎಂಟು ಜನ ಫಲಾನುಭವಿಗಳಿಗೆ ಗ್ಯಾಸ್ ವಿತರಣೆ ಮಾಡಿದ್ದು ಜನರ ಆರೋಗ್ಯದ ರಕ್ಷಣೆ ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದು ಹೇಳಿದರು.
ಪುರಸಭೆ ಅಧ್ಯಕ್ಷ ಗೀತಾ ಮಾಡಲಗೇರಿ, ಉಪಾಧ್ಯಕ್ಷ ದುರ್ಗಪ್ಪ ಹಿರೇಮನಿ,ಸದಸ್ಯರಾದ ಮಲ್ಲಯ್ಯ ಮಹಾಪುರುಷಮಠ, ಗದಿಗೆಪ್ಪ ಕಿರೇಸೂರ,ಬಾವಾಸಾಬ ಬೆಟಗೇರಿ, ಸಂಗಪ್ಪ ಜಿಡ್ಡಿಬಾಗಿಲ, ಸಂತೋಷ ಕಡಿವಾಳ, ಈಶ್ವರ ಕಡಬಿನಕಟ್ಟಿ, ಶಕುಂತಲಾ ಚಿತ್ರಗಾರ, ರಂಗಮ್ಮ ಭಜಂತ್ರಿ, ವಿಜಯಲಕ್ಷ್ಮಿ ಕೊಟಗಿ, ಮುಖ್ಯಾಧಿಕಾರಿ ರಮೇಶ ಹೊಸಮನಿ ಸೇರಿದಂತೆ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.