ADVERTISEMENT

ಇಂದಿನಿಂದ 4 ದಿನ ಭಾವಪ್ರಚಾರ ಪರಿಷತ್‌ ವಾರ್ಷಿಕ ಸಮ್ಮೇಳನ

ಗದುಗಿನ ರಾಮಕೃಷ್ಣ-ವಿವೇಕಾನಂದ ಆಶ್ರಮದ ಸಹಯೋಗದಲ್ಲಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2019, 13:07 IST
Last Updated 11 ಡಿಸೆಂಬರ್ 2019, 13:07 IST
ನಿರ್ಭಯಾನಂದ ಸ್ವಾಮೀಜಿ
ನಿರ್ಭಯಾನಂದ ಸ್ವಾಮೀಜಿ   

ಗದಗ: ‘ರಾಮಕೃಷ್ಣ-ವಿವೇಕಾನಂದ ಭಾವಪ್ರಚಾರ ಪರಿಷತ್‌ನಿಂದ ಡಿ.12ರಿಂದ 15ರವರೆಗೆ ನಾಲ್ಕು ದಿನ ನಗರದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ 6ನೇ ವಾರ್ಷಿಕ ಸಮ್ಮೇಳನ ನಡೆಯಲಿದೆ ಎಂದು ಗದುಗಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಡಿ.12ರಂದು ಬೆಳಿಗ್ಗೆ 10ಗಂಟೆಗೆ ಚೆನ್ನೈನ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಗೌತಮಾನಂದಜಿ ಮಹಾರಾಜರು ಕಾರ್ಯಕ್ರಮ ಉದ್ಘಾಟಿಸುವರು.ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮೈಸೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಮುಕ್ತಿದಾನಂದಜಿ ಮಹಾರಾಜ್, ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜ, ಬೆಟಗೇರಿ ನೀಲಕಂಠ ಮಠದ ಪೀಠಾಧಿಪತಿ ನೀಲಕಂಠ ಪಟ್ಟದಾರ್ಯ ಸ್ವಾಮೀಜಿ ಭಾಗವಹಿಸುವರು ಎಂದರು.

‘ಭಾವಪ್ರಚಾರ ಪರಿಷತ್ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಮಹಾರಾಜ್, ಸ್ವಾಮಿ ಅನುಪಮಾನಂದಜಿ, ಸ್ವಾಮಿ ಬೋಧಸ್ವರೂಪಾನಂದಜಿ, ಸ್ವಾಮಿ ಆತ್ಮಪ್ರಾಣಾಂದಜಿ, ಸ್ವಾಮಿ ವೀರೇಶಾನಂದಜಿ, ಫಕ್ಕೀರೇಶ್ವರ ಸ್ವಾಮೀಜಿ, ಶಿವಕುಮಾರ ಸ್ವಾಮೀಜಿ, ಸ್ವಾಮಿ ಪ್ರಕಾಶಾನಂದಜಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ನಂತರ ಎರಡು ಉಪನ್ಯಾಸ ಮಾಲಿಕೆ ನಡೆಯಲಿವೆ. ಬೆಳಿಗ್ಗೆ 9ಕ್ಕೆ ಮೊದಲ ಉಪನ್ಯಾಸ ಮಾಲಿಕೆಯಲ್ಲಿ ಮುಂಡರಗಿಯ ಡಾ. ಅನ್ನದಾನೀಶ್ವರ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ವಿವಿಧ ಮಠಾಧೀಶರು ಉಪನ್ಯಾಸ ನೀಡುವರು. 2ನೇ ಉಪನ್ಯಾಸ ಮಾಲಿಕೆಯಲ್ಲಿ ಪೊಲೀಸ್ ಅಧಿಕಾರಿ ರವಿ ಡಿ. ಚನ್ನಣ್ಣವರ ಸೇರಿ ಅನೇಕ ಸಾಧಕರು ಉಪನ್ಯಾಸ ನೀಡುವರು’ ಎಂದು ಅವರು ವಿವರಿಸಿದರು.

ADVERTISEMENT

‘ಡಿ.14 ರಂದುಯುವ ಸಮ್ಮೇಳನ ಹಾಗೂ ಸ್ವಾಮಿ ವಿವೇಕಾನಂದರ ಷಿಕ್ಯಾಗೊ ಭಾಷಣದ 125ನೇ ವರ್ಷಾಚರಣೆಯ ಸಮಾರೋಪ ನಡೆಯಲಿದೆ.ಡಿ.15 ರಂದು ಸಮ್ಮೇಳನದ ಸಮಾರೋಪ ನಡೆಯಲಿದ್ದು, ಸ್ವಾಮಿ ಗೌತಮಾನಂದಜಿ ಮಹಾರಾಜರು, ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಹಾಗೂ ಶಿವಾನಂದ ಮಠದ ಡಾ.ಅಭಿನವ ಶಿವಾನಂದ ಸ್ವಾಮೀಜಿ ಸಾನಿಧ್ಯ ವಹಿಸುವರು’ ಎಂದರು.

ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಡಿ.ಆರ್. ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.