
ಪ್ರಜಾವಾಣಿ ವಾರ್ತೆಗದಗ: ಇಲ್ಲಿನ ಸರ್ಕಾರಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಡಿ ಗ್ರೂಪ್ ಹೊರಗುತ್ತಿಗೆ ನೌಕರರಾಗಿದ್ದ ಮೈಲಾರಲಿಂಗೇಶ್ವರ (35) ಎಂಬುವರು ಆಸ್ಪತ್ರೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ವ್ಯಕ್ತಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಚಿಕ್ಕಮುದುರೆ ಗ್ರಾಮದವರು ಎಂದು ಗೊತ್ತಾಗಿದೆ.
ಮೈಲಾರಲಿಂಗೇಶ್ವರ ಅವರು 2019ರಿಂದ ಆಯುರ್ವೇದ ಆಸ್ಪತ್ರೆಯಲ್ಲಿ ಡಿ ಗ್ರೂಪ್ ಹೊರಗುತ್ತಿಗೆ ನೌಕರರಾಗಿ ಕೆಲಸ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ, ಬೆಟಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.