ADVERTISEMENT

ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಅಧಿಸೂಚನೆ: ಮಾರ್ಚ್‌ 3ರಂದು ಚುನಾವಣೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2026, 6:39 IST
Last Updated 24 ಫೆಬ್ರುವರಿ 2026, 6:39 IST
<div class="paragraphs"><p> ಚುನಾವಣೆ</p></div>

ಚುನಾವಣೆ

   

- ಐಸ್ಟಾಕ್ ಚಿತ್ರ

ಗದಗ: ಹೈಕೋರ್ಟ್‌ನ ನಿರ್ದೇಶನದಂತೆ ಗದಗ ಬೆಟಗೇರಿ ನಗರಸಭೆಯ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಚುನಾವಣೆಗೆ ಅಧಿನೂಚನೆ ಪ್ರಕಟವಾಗಿದೆ.

ADVERTISEMENT

ಜಿಲ್ಲೆಯಲ್ಲಿ ರಾಜಕೀಯ ಶೀತಲ ಸಮರಕ್ಕೆ ಕಾರಣವಾಗಿದ್ದ ಬಿಜೆಪಿಯ ನಗರಸಭೆ ಮೂವರ ಸದಸ್ಯರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತರ ಸದಸ್ಯತ್ವ ಅನರ್ಹತೆ ಆದೇಶವನ್ನು ಹೈಕೋರ್ಟ್‌ ಎತ್ತಿ ಹಿಡಿದಿತ್ತು. ಜತೆಗೆ ಮುಂದಿನ 45 ದಿನಗಳ ಒಳಗಾಗಿ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಿತ್ತು.

ಈ ಆದೇಶದ ಬೆನ್ನಲ್ಲೇ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ಮತ್ತೊಮ್ಮೆ ದಿನಾಂಕ ನಿಗದಿಗೊಳಿಸಲಾಗಿದೆ. ಚುನಾವಣಾ ಅಧಿಕಾರಿ ಗಂಗಪ್ಪ ಎಂ. ಅವರು ಮಾರ್ಚ್‌ 3ರಂದು ಮಧ್ಯಾಹ್ನ 2ಕ್ಕೆ ಚುನಾವಣೆ ನಡೆಸಲು ಸೋಮವಾರ ಅಧಿಸೂಚನೆ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.