
ಮಳೆ
ಗದಗ: ಅವಳಿ ನಗರದ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಶುಕ್ರವಾರ ಇಡೀ ದಿನ ಜಿಟಿಜಿಟಿ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿತ್ತು.
ಬಿಟ್ಟು ಬಿಟ್ಟು ಮಳೆ ಸುರಿದ ಪರಿಣಾಮ ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ತೊಂದರೆ ಅನುಭವಿಸಿದರು. ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಇಳಿಮುಖವಾಗಿತ್ತು.
ನಿರಂತರ ಮಳೆಯಿಂದಾಗಿ ರಸ್ತೆ ಪಕ್ಕದಲ್ಲಿನ ಚರಂಡಿಗಳು ತುಂಬಿ ಹರಿದವು. ನಗರಸಭೆಯವರು ಚರಂಡಿಗಳನ್ನು ಸೂಕ್ತವಾಗಿ ನಿರ್ಹವಣೆ ಮಾಡದ ಕಾರಣ ಚರಂಡಿಯ ಕೊಳಚೆಯೆಲ್ಲವೂ ರಸ್ತೆಯಲ್ಲೇ ಹರಿಯಿತು. ನಗರದ ಪ್ರಮುಖ ವೃತ್ತಗಳು, ಮಾರುಕಟ್ಟೆ ಪ್ರದೇಶದಲ್ಲಿ ಕೊಳಚೆ ನೀರು, ಪ್ಲಾಸ್ಟಿಕ್ ತ್ಯಾಜ್ಯಗಳು ರಸ್ತೆಯಲ್ಲೇ ಬಿದ್ದಿದ್ದ ದೃಶ್ಯಗಳು ಕಂಡುಬಂದವು.
ಸಣ್ಣ ಮಳೆಗೂ ಉಕ್ಕಿ ಹರಿಯುವ ಚರಂಡಿಗಳ ಅವ್ಯವಸ್ಥೆ ಕಂಡು ಸಾರ್ವಜನಿಕರು ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇನ್ನು, ನಿರಂತರ ಮಳೆಗೆ ಓಣಿಗಳಲ್ಲಿನ ಮಣ್ಣಿನ ರಸ್ತೆಗಳ ಸ್ಥಿತಿ ಅಯೋಮಯವಾಗಿತ್ತು. ದ್ವಿಚಕ್ರ ವಾಹನ ಸವಾರರು ಮಣ್ಣಿನ ರಸ್ತೆಯಲ್ಲಿ ಅಡ್ಡಾಡಲು ಹರಸಾಹಸ ಪಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.