ADVERTISEMENT

ಗದಗ | ಆಕಳಿನ ರುಂಡ, ದೇಹ ಪತ್ತೆ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2025, 18:07 IST
Last Updated 1 ಡಿಸೆಂಬರ್ 2025, 18:07 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಗದಗ: ಇಲ್ಲಿನ ಎಪಿಎಂಸಿ ಆವರಣದ ದನದ ಮಾರುಕಟ್ಟೆ ಪ್ರಾಂಗಣದಲ್ಲಿ ಸೋಮವಾರ ಆಕಳಿನ ರುಂಡ, ದೇಹ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಕರ್ನಾಟಕ ರಾಜ್ಯ ಹಿಂದೂ ಸಂಘಟನೆಗಳ ಒಕ್ಕೂಟದ ಸಂಚಾಲಕ ರಾಜು ಖಾನಪ್ಪನವರ ಆಗ್ರಹಿಸಿದ್ದಾರೆ.

‘ಜಿಲ್ಲೆಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು. ಅಕ್ರಮವಾಗಿ ವಧೆ ಮಾಡಿದರೂ ಸರ್ಕಾರ ಕ್ರಮ ಜರುಗಿಸುತ್ತಿಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.