ADVERTISEMENT

ಗದಗ: ಕರುವಿನಕೊಪ್ಪ ಗ್ರಾಮ ಸಂಪೂರ್ಣ ಜಲಾವೃತ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2019, 3:51 IST
Last Updated 22 ಅಕ್ಟೋಬರ್ 2019, 3:51 IST
ಗದಗ ಜಿಲ್ಲೆಯ ಹಲವು ಗ್ರಾಮಗಳಿಗೆ ನೀರು ನುಗ್ಗಿದೆ.
ಗದಗ ಜಿಲ್ಲೆಯ ಹಲವು ಗ್ರಾಮಗಳಿಗೆ ನೀರು ನುಗ್ಗಿದೆ.   

ಗದಗ: ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಡೀ ಧಾರಾಕಾರ ಮಳೆಯಾಗಿದೆ.

ಮಲಪ್ರಭಾ ಪ್ರವಾಹದಿಂದ ರೋಣ ತಾಲ್ಲೂಕಿನ ಕುರುವಿನಕೊಪ್ಪ, ಅಮರಗೋಳ, ಹೊಳೆಹಡಗಲಿ ಮೆಣಸಗಿ ಹಾಗೂ ಹೊಳೆಆಲೂರು ಗ್ರಾಮಗಳಿಗೆ ನೀರು ನುಗ್ಗಿದೆ. ಕುರುವಿನಕೊಪ್ಪ ಗ್ರಾಮ ಸಂಪೂರ್ಣ ಜಲಾವೃತಗೊಂಡಿದೆ.

ಕುರುವಿನಕೊಪ್ಪ ಗ್ರಾಮಸ್ಥರನ್ನು ಸಂಪೂರ್ಣವಾಗಿ ಸೋಮವಾರವೇ ನವಗ್ರಾಮಕ್ಕೆ ಸ್ಥಳಾಂತರಿಸಲಾಗಿದೆ. ಇನ್ನೂ ನೀರು ಹೆಚ್ಚುವ ಸಾಧ್ಯತೆ ಇದ್ದು, ನೆರೆ ಸಾಧ್ಯತೆ ಇರುವ ಇತರೆ ಗ್ರಾಮಗಳಿಂದ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಪೊಲೀಸರು ಹಾಗೂ ತಾಲ್ಲೂಕು ಆಡಳಿತದ ಸಿಬ್ಬಂದಿ ಗ್ರಾಮಸ್ಥರಿಗೆ ಸೂಚನೆ ನೀಡುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.