ಗದಗ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗದಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ನಟರಾಜ ಸವಡಿ ಅವರನ್ನು ರಾಜ್ಯ ಘಟಕದ ಅಧ್ಯಕ್ಷ ವಾಸುದೇವ ಮೇಟಿ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ, ಗದಗ ತಾಲ್ಲೂಕು ಅಧ್ಯಕ್ಷರಾಗಿ ಮೋಹನ ಇಮರಾಪೂರ, ಶಿರಹಟ್ಟಿ ತಾಲ್ಲೂಕು ಅಧ್ಯಕ್ಷರಾಗಿ ಮಾರುದ್ರಯ್ಯ ಲಕ್ಕುಂಡಿ, ಮುಂಡರಗಿ ತಾಲ್ಲೂಕು ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಹಿರೇಮಠ, ರೋಣ ತಾಲ್ಲೂಕು ಅಧ್ಯಕ್ಷರಾಗಿ ಸೋಮಶೇಖರ ಕಡಗದ, ಲಕ್ಷ್ಮೆಶ್ವರ ತಾಲ್ಲೂಕು ಅಧ್ಯಕ್ಷರಾಗಿ ರುದ್ರಗೌಡ ಪಾಟೀಲ ಅವರನ್ನು ಆಯ್ಕೆ ಮಾಡಲಾಯಿತು.
ರಾಜ್ಯ ಘಟಕದ ಅಧ್ಯಕ್ಷ ವಾಸುದೇವ ಮೇಟಿ ಮಾತನಾಡಿ, ‘ಹೊಸದಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳು ರೈತ ಸಂಘದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿರಬೇಕು. ರೈತರ ಹಿತ ಕಾಪಾಡಲು ಸನ್ನದ್ಧರಾಗಿರಬೇಕು’ ಎಂದರು.
ಜಿಲ್ಲೆಯ ಉಳಿದ ತಾಲ್ಲೂಕು ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಶೀಘ್ರ ನೇಮಕ ಮಾಡಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಗ್ರಾಮ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ನೇಮಕ ಮಾಡಲು ಜಿಲ್ಲಾ ಘಟಕದ ನೂತನ ಅಧ್ಯಕ್ಷರಿಗೆ ಸೂಚಿಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಗಣ್ಣ ಬಾಗೇವಾಡಿ, ರಾಜ್ಯ ಉಪಾಧ್ಯಕ್ಷ ವಿ.ಎಸ್.ಕಂಟಪ್ಪಗೌಡ್ರು, ರಾಜ್ಯ ಕಾರ್ಯದರ್ಶಿ ಫಕೀರಪ್ಪ ಪೂಜಾರಿ, ತಾಳಿಕೋಟಿ ತಾಲ್ಲೂಕಿನ ಅಧ್ಯಕ್ಷ ವೀರಪ್ಪ ಮಡಿವಾಳ ಸೇರಿದಂತೆ ಹಲವರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.