
ಗದಗ: ನಗರದ ಬಿ.ಜಿ.ಅಣ್ಣಿಗೇರಿ ಗುರುಗಳ ಪ್ರತಿಭಾ ಪ್ರತಿಷ್ಠಾನ ಕೈಗೊಂಡಿರುವ ಶೈಕ್ಷಣಿಕ ಕಾರ್ಯಚಟುವಟಿಕೆಗಳನ್ನು ಗಮನಿಸಿದ ಇಂಗ್ಲೆಂಡ್‌ನ ವೇಯ್ನ್ ಕಾರ್ಟರ್ ದಂಪತಿ ಆಶ್ರಮದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲಕ್ಕಾಗಿ ₹1 ಲಕ್ಷ ಮೌಲ್ಯದ ಡಿಜಿಟಲ್ ಇಂಟ್ರಾಕ್ಟಿವ್ ಫ್ಲಾಟ್ ಬೋರ್ಡ್ ಕೊಡುಗೆಯಾಗಿ ನೀಡಿದ್ದಾರೆ.
ಆಶ್ರಮದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕಾರ್ಟರ್ ದಂಪತಿ ಮಕ್ಕಳಿಗೆ ಸಿಹಿ ವಿತರಿಸಿ, ಬೋರ್ಡ್ ಅನ್ನು ಕೊಡುಗೆಯಾಗಿ ನೀಡಿದರು.
ಬಿ.ಜಿ.ಅಣ್ಣಿಗೇರಿ ಗುರುಗಳ ಪ್ರತಿಭಾ ಪ್ರತಿಷ್ಠಾನದ ಅಧ್ಯಕ್ಷ ಶಿವಕುಮಾರ ಪಾಟೀಲ ಕೃತಜ್ಞತೆ ಸಲ್ಲಿಸಿದರು.
ಹೈಟೆನ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸಾಯಿಕುಮಾರ್ ಸೇರಿದಂತೆ ಟ್ರಸ್ಟ್‌ನ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಆಶ್ರಮದ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.