ADVERTISEMENT

ಗದಗ: ಮಹಿಳಾ ಕಾಲೇಜಿನಲ್ಲಿ ಹಿಜಾಬ್‌, ಕೇಸರಿ ಶಾಲು ತಿಕ್ಕಾಟ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಫೆಬ್ರುವರಿ 2022, 12:40 IST
Last Updated 7 ಫೆಬ್ರುವರಿ 2022, 12:40 IST
ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿನಿಯರು
ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿನಿಯರು   

ಗದಗ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಬಂದಿದ್ದರು. ಇದಕ್ಕೆ ಪ್ರತಿರೋಧ ಒಡ್ಡಿದ ಕೆಲವು ವಿದ್ಯಾರ್ಥಿನಿಯರು ಕೇಸರಿ ಶಾಲು ಹಾಕಿಕೊಂಡು ಸೋಮವಾರ ತರಗತಿಗೆ ಹಾಜರಾದರು.

‘ಕಾಲೇಜಿನ ಪ್ರಥಮ ವರ್ಷದ ಬಿಎ ತರಗತಿಗೆ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಬಂದಿದ್ದರು. ಇದಕ್ಕೆ ಪ್ರತಿಯಾಗಿ ಕೆಲವು ವಿದ್ಯಾರ್ಥಿನಿಯರು ಕೇಸರಿ ಶಾಲು ಹಾಕಿಕೊಂಡು ಕಾಲೇಜು ಆವರಣದಲ್ಲಿ ತಿರುಗಾಡಿದ್ದಾರೆ. ಎಲ್ಲ ವಿದ್ಯಾರ್ಥಿಗಳಿಗೂ ಮಂಗಳವಾರ ಈ ಬಗ್ಗೆ ತಿಳಿವಳಿಕೆ ಮೂಡಿಸಲಾಗುವುದು’ ಎಂದು ಪ್ರಾಂಶುಪಾಲ ಪ್ರಕಾಶ್‌ ಹೊಸಮನಿ ತಿಳಿಸಿದ್ದಾರೆ.

‘ಇಂತಹ ಘಟನೆ ನಮ್ಮ ಕಾಲೇಜಿನಲ್ಲಿ ಇದೇ ಮೊದಲಬಾರಿಗೆ ನಡೆದಿದೆ. ಸೋಮವಾರ ನಡೆದ ಘಟನೆಯಿಂದ ಶಾಂತಿ ಭಂಗ ಆಗಿಲ್ಲ. ಶಿಕ್ಷಣ ಇಲಾಖೆ ಆದೇಶದಂತೆ ಇನ್ನು ಮುಂದೆ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿಯೇ ಕಾಲೇಜಿಗೆ ಬರುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ಮಂಗಳವಾರದಿಂದ ಎಲ್ಲ ವಿದ್ಯಾರ್ಥಿಗಳನ್ನು ಪರಿಶೀಲಿಸಿ ತರಗತಿಗಳಿಗೆ ಪ್ರವೇಶ ನೀಡಲಾಗುವುದು’ ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.