ಲಕ್ಷ್ಮೇಶ್ವರ: ‘ಭಾರತ ಧರ್ಮದ ಆಧಾರದ ಮೇಲೆ ನಿಂತಿರುವ ಆಧ್ಯಾತ್ಮಿಕ ದೇಶ. ಇಲ್ಲಿನ ಧರ್ಮಾಚರಣೆ ಇತರೇ ದೇಶಗಳಿಗೆ ಮಾದರಿ. ಧರ್ಮವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ’ ಎಂದು ಮುಕ್ತಿಮಂದಿರದ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಇಲ್ಲಿನ ಅಕ್ಕಮಹಾದೇವಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ನಡೆದ ಶ್ರಾವಣ ಸಂಜೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
‘ಮುಕ್ತಿಮಂದಿರ ಸಂಸ್ಥಾಪಕರಾದ ವೀರಗಂಗಾಧರ ಶಿವಾಚಾರ್ಯ ಸ್ವಾಮೀಜಿ ಧರ್ಮದ ಮಹತ್ವವನ್ನು ಅರಿತು ಮಾನವ ಧರ್ಮಕ್ಕೆ ಜಯವಾಗಲಿ ಧರ್ಮದಿಂದಲೇ ಶಾಂತಿ ಎಂಬ ಮಂತ್ರವನ್ನು ಜಗತ್ತಿಗೆ ಸಾರಿದ್ದಾರೆ’ ಎಂದರು.
ನಿವೃತ್ತ ಶಿಕ್ಷಕ ಎಸ್.ಎಸ್. ನಾಗಲೋಟಿ ಅಧ್ಯಕ್ಷತೆ ವಹಿಸಿದ್ದರು. ಎಸ್.ವಿ. ಸಜ್ಜನಶೆಟ್ರ ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳ ಕುರಿತು ಉಪನ್ಯಾಸ ನೀಡಿದರು. ಈ ವೇಳೆ ತಾಲ್ಲೂಕು ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ನಿರ್ಮಲಾ ಅರಳಿ, ನಾಗಭೂಷಣ ಪವಾಡಶೆಟ್ಟರ, ಮಲ್ಲಿಕಾರ್ಜುನ ಕಳಸಾಪುರ, ಪರಮೇಶ್ವರಪ್ಪ ಬಂಕಾಪುರ. ಎಂ.ಪಿ. ಹುಬ್ಬಳ್ಳಿ, ಕಿರಣ ನಾಲ್ವಾಡ, ತನ್ಮಯಿ ವಡಕಣ್ಣವರ, ಶೋಭಾ ಗಾಂಜಿ, ಮಧುಮತಿ ಹತ್ತಿಕಾಳ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.