ADVERTISEMENT

ಗದಗ | ದತ್ತಿ ನಿಧಿ ಪ್ರಶಸ್ತಿಗೆ ತನುಜಾ ನಾಯಕ ಆಯ್ಕೆ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2026, 6:57 IST
Last Updated 25 ಫೆಬ್ರುವರಿ 2026, 6:57 IST
ತನುಜಾ ನಾಯಕ
ತನುಜಾ ನಾಯಕ   

ಗದಗ: ಹುಬ್ಬಳ್ಳಿಯ ಅವ್ವ ಸೇವಾ ಟ್ರಸ್ಟ್‌, ಗದಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಮಾತೋಶ್ರೀ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಸ್ಮರಣಾರ್ಥ ಸ್ಥಾಪಿಸಿರುವ ದತ್ತಿ ನಿಧಿಯ 2025–26ನೇ ಸಾಲಿನ ಪ್ರಶಸ್ತಿಗೆ ‘ಸಂಯುಕ್ತ ಕರ್ನಾಟಕ’ ಪತ್ರಿಕೆಯ ಹಿರಿಯ ಉಪಸಂಪಾದಕಿ ತನುಜಾ ನಾಯಕ ಆಯ್ಕೆಯಾಗಿದ್ದಾರೆ.

‘ಫೆ.26ರಂದು ನಗರದ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿಶ್ವವಿದ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ತನುಜಾ ನಾಯಕ ಅವರಿಗೆ ‘ಮಾಧ್ಯಮ ಚೇತನ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ₹10 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ’ ಎಂದು ಟ್ರಸ್ಟ್‌ನ ಕಾರ್ಯದರ್ಶಿ ಶಶಿ ಸಾಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT