
ಗದಗ: ಗದಗ-ಯಲವಗಿ ನೂತನ ಮಾರ್ಗ ಹಾಗೂ ಗದಗ ಬೈಪಾಸ್ ಮೂಲಕ ಸಂಚರಿಸುವ ಎಲ್ಲ ರೈಲುಗಳನ್ನು ಗದಗ ಜಂಕ್ಷನ್ ಮೂಲಕ ಸಂಚರಿಸಲು ಕ್ರಮವಹಿಸುವಂತೆ ಆಗ್ರಹಿಸಿ ಗದಗ ಜಿಲ್ಲಾ ವಿಕಾಸ ವೇದಿಕೆ ಅಧ್ಯಕ್ಷ ವಿಶ್ವನಾಥ ಖಾನಾಪುರ ಅವರು ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಈಚೆಗೆ ಮನವಿ ಸಲ್ಲಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಬೊಮ್ಮಾಯಿ, ‘ಗದಗ ಬೈಪಾಸ್ ಮೂಲಕ ಸಂಚರಿಸುವ ರೈಲುಗಳು ಗದಗ ಮುಖ್ಯ ಜಂಕ್ಷನ್ ಮೂಲಕವೇ ಸಂಚರಿಸಬೇಕು ಎಂಬುದರ ಕುರಿತು ಈಗಾಗಲೇ ರೈಲ್ವೆ ಸಚಿವರು, ರೈಲ್ವೆ ಇಲಾಖೆ ಹಾಗೂ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅವರ ಗಮನಕ್ಕೆ ತಂದಿದ್ದೇನೆ’ ಎಂದರು.
‘ಗದಗ–ಯಲವಗಿ ನೂತನ ಮಾರ್ಗದ ಕಾರ್ಯ ಈಗಾಗಲೇ ಆರಂಭಗೊಂಡಿದೆ. ಕಾಮಗಾರಿ ವೇಗ ಹೆಚ್ಚಿಸುವ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯುವೆ’ ಎಂದೂ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.