
ಗದಗ: ಜಿಲ್ಲೆಯಾದ್ಯಂತ ರೈತರು ಕಡಲೆ ಬೆಳೆ ಬೆಳೆಯಲಾಗಿದ್ದು, ಈ ಕೂಡಲೇ ಸರ್ಕಾರ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಒತ್ತಾಯಿಸಿ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಅಂದಪ್ಪ ರುದ್ರಪ್ಪ ಕೋಳೂರ ಹಾಗೂ ಜಿಲ್ಲಾಧ್ಯಕ್ಷ ಯಲ್ಲಪ್ಪ ಎಚ್. ಬಾಬರಿ ಅವರ ನೇತೃತ್ವದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ದುರಗೇಶ್ ಕೆ. ಆರ್. ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಕಡಲೆ ಬೆಳೆ ಪ್ರತಿ ಕ್ವಿಂಟಲ್‌ಗೆ ₹10 ಸಾವಿರ ಬೆಂಬಲ ಬೆಲೆ ಹಾಗೂ ಪ್ರತಿ ರೈತರಿಂದ 50 ಕ್ವಿಂಟಲ್ ಕಡಲೆ ಬೆಳೆ ಖರೀದಿಸಬೇಕು. ಒಂದು ತಿಂಗಳೊಳಗೆ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆ ಮಾಡಬೇಕು ಎಂದು ರೈತರು ಆಗ್ರಹಿಸಿದರು.
ರೈತ ಮುಖಂಡ ಬಸವರಾಜ ಹೂಗಾರ ಮಾತನಾಡಿದರು. ರೈತ ಸಂಘದ ಹಾವೇರಿ ಜಿಲ್ಲಾ ಘಟಕ ಅಧ್ಯಕ್ಷ ಯಲ್ಲಪ್ಪ ವಾಲ್ಮೀಕಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.