ಗದಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶನಿವಾರ ಸಂಜೆ 6.30ಕ್ಕೆ ತೋಂಟದ ಸಿದ್ಧಲಿಂಗ ಶ್ರೀಗಳ ಕನ್ನಡ ಭವನದಲ್ಲಿ ದಿ. ಗಿರೋಸಾ ಬದಿ ಹಾಗೂ ದಿ. ಎಲ್ಲೂಬಾಯಿ ಬದಿ ಸ್ಮರಣಾರ್ಥ ದತ್ತಿ ಉಪನ್ಯಾಸ ಏರ್ಪಡಿಸಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಅವರ ಕೊಡುಗೆ ಕುರಿತು ಪ್ರೊ. ಎಚ್.ಎನ್.ಕಾಳೆ ಉಪನ್ಯಾಸ ನೀಡುವರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು. ದತ್ತಿದಾನಿ ರತ್ನಾ ಗಿರೋಸಾ ಬದಿ ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ಸಾಹಿತ್ಯಾಭಿಮಾನಿಗಳು, ಸಾಹಿತಿಗಳು, ಪರಿಷತ್ತಿನ ಸದಸ್ಯರು ಭಾಗವಹಿಸಬೇಕು ಎಂದು ಕಿಶೋರಬಾಬು ನಾಗರಕಟ್ಟಿ, ದತ್ತಪ್ರಸನ್ನ ಪಾಟೀಲ, ಡಿ.ಎಸ್.ಬಾಪುರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.