ADVERTISEMENT

ಗದಗ: ಲೋಕ ಅದಾಲತ್: 3,740 ಪ್ರಕರಣ ಇತ್ಯರ್ಥ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2025, 6:19 IST
Last Updated 21 ಸೆಪ್ಟೆಂಬರ್ 2025, 6:19 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಗದಗ: ಜಿಲ್ಲೆಯ ವಿವಿಧ ತಾಲ್ಲೂಕುಗಳ ನ್ಯಾಯಾಧೀಶರು, ವಕೀಲರು, ಅಭಿಯೋಜನಾ, ಪೊಲೀಸ್, ಅಬಕಾರಿ, ಗಣಿ ಮತ್ತು ಭೂ, ಕಾರ್ಮಿಕ, ಕಂದಾಯ ಇಲಾಖೆ ಅಧಿಕಾರಿಗಳು ಆಯಾ ತಾಲ್ಲೂಕು ನ್ಯಾಯಾಲಯಗಳಲ್ಲಿ ಸೆ.13 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು 3740 ಪ್ರಕರಣಗಳನ್ನು ರಾಜೀ ಸಂಧಾನಗೊಳಿಸಿದರು.

ಜಿಲ್ಲೆಯಲ್ಲಿ ಒಟ್ಟು 13 ಬೆಂಚ್‌ಗಳನ್ನು ರಚಿಸಿ ರಾಜೀ ಸಂಧಾನಕ್ಕೆ ಆಯ್ಕೆ ಮಾಡಿಕೊಳ್ಳಲಾಗಿತ್ತು. ಅದರಲ್ಲಿ ನ್ಯಾಯಾಲಯದಲ್ಲಿರುವ 3740 ಚಾಲ್ತಿ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಲಾಗಿದೆ ಹಾಗೂ 28486 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಲಾಗಿದ್ದು, ಒಟ್ಟು 32226 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.

ADVERTISEMENT

ಇತ್ಯರ್ಥಗೊಂಡ ಪ್ರಕರಣಗಳಲ್ಲಿ 7 ಮೋಟಾರು ವಾಹನ ಅಪಘಾತ ಪ್ರಕರಣಗಳು, 72 ಚೆಕ್‌ಬೌನ್ಸ್ ಪ್ರಕರಣಗಳು, 55 ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು, 17 ಅಸಲು ದಾವೆ ಪ್ರಕರಣಗಳು, 27 ಬ್ಯಾಂಕ್ ಹಾಗೂ ಹಣ ವಸೂಲಾತಿ ಪ್ರಕರಣಗಳು, 5 ವೈವಾಹಿಕ ಪ್ರಕರಣಗಳು, 45 ವಿದ್ಯುತ್ ಕಾಯ್ದೆ ಪ್ರಕರಣಗಳು ಸೇರಿದಂತೆ ಒಟ್ಟು 3740 ಚಾಲ್ತಿ ಪ್ರಕರಣಗಳನ್ನು ಒಟ್ಟು ₹10,17,70,828 ಗಳಿಗೆ ಪರಿಹಾರ ಒದಗಿಸುವುದರ ಮೂಲಕ ರಾಜೀ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಗಿದೆ.

ವ್ಯಾಜ್ಯಪೂರ್ವ ಪ್ರಕರಣಗಳಿಗೆ ಸಂಬಂಧಿಸಿದಂತೆ 149 ವಿವಿಧ ಬ್ಯಾಂಕ್ ಪ್ರಕರಣಗಳು, 18 ಕಂದಾಯ ಅದಾಲತ್ ಪ್ರಕರಣಗಳು ಸೇರಿದಂತೆ ಒಟ್ಟು 28486 ವ್ಯಾಜ್ಯ ಪೂರ್ವ ಪ್ರಕರಣಗಳು ₹35217499 ಗಳಿಗೆ ರಾಜೀ ಸಂಧಾನವಾಗಿದೆ.

ವಿಶೇಷವಾಗಿ ಗದುಗಿನ 1ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ 1 ಪ್ರಕರಣದಲ್ಲಿ ದಂಪತಿಗಳನ್ನು ಪುನಃ ಒಂದುಗೂಡಿಸಿ ಹಾರ ಬದಲಾಯಿಸಿ ಅವರಿಗೆ ಸಿಹಿ ಹಂಚಿ ಕಳುಹಿಸಿ ಕೊಡಲಾಯಿತು .ಪ್ರಧಾನ ಹಿರಿಯ ಸೆಷನ್ಸ್‌ ನ್ಯಾಯಾಲಯ ಮತ್ತು ಸಿಜೆಎಂ 2, ಲಕ್ಷ್ಮೇಶ್ವರ ದಲ್ಲಿ 1 ಜೋಡಿ ದಂಪತಿಗಳನ್ನು ಪುನಃ ಒಂದುಗೂಡಿಸಿ ಸಿಹಿ ಹಂಚಿ ಕಳುಹಿಸಿದ್ದಾರೆ. ಒಟ್ಟು4 ಜೋಡಿಗಳು ಈ ರಾಷ್ಟ್ರೀಯ ಲೋಕ ಅದಾಲತದಲ್ಲಿ ಪುನಃ ಒಂದುಗೂಡಿ ಹೋಗಿದ್ದು ವಿಶೇಷವಾಗಿದೆ.

ರಾಷ್ಟ್ರೀಯ ಲೋಕ ಅದಾಲತ್‌ಗೆ ಸಹಕಾರ ನೀಡಿದವರಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಅವರು ಧನ್ಯವಾದಗಳನ್ನು ಅರ್ಪಿಸಿದರು.

ಮತ್ತು ನಗರದಲ್ಲಿ ಜರುಗಿದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷೆ ನಾಗವೇಣಿ, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಗಂಗಾಧರ.ಸಿ.ಎಂ, ಪ್ರಧಾನ ಹಿರಿಯ ಸೆಷನ್ಸ್‌ ನ್ಯಾಯಾಧೀಶ ಸಿಜೆಎಂ ಜಿ.ಆರ್.ಶೆಟ್ಟರ, ಜೆಎಂಎಫ್‌ಸಿ 1ನೇ ನ್ಯಾಯಾಲಯದ ಸೆಷನ್ಸ್‌ ನ್ಯಾಯಾಧೀಶೆ ಶಿಲ್ಪಾ ತಿಮ್ಮಾಪುರ, ಜೆಎಂಎಫ್‌ಸಿ 2ನೇ ನ್ಯಾಯಾಲಯದ ಸೆಷನ್ಸ್‌ ನ್ಯಾಯಾಧೀಶ ಬೀರಪ್ಪ ಕಾಂಬಳೆ ಹಾಗೂ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಜಿ.ಕಲ್ಲೂರ, ಉಪಾಧ್ಯಕ್ಷ ಎಂ.‌ಎ.ಸಂಗನಾಳ, ಸರ್ಕಾರಿ ಅಭಿಯೋಜಕಿ ಸವಿತಾ.ಎಂ.ಶಿಗ್ಲಿ, ಜಿಲ್ಲಾ ಸರ್ಕಾರಿ ವಕೀಲರಾದ ಎಂ.ಎ.ಕುಕನೂರ, ಜಿಲ್ಲಾ ಹೆಚ್ಚುವರಿ ಸರ್ಕಾರಿ ವಕೀಲ ಜಿ.ಬಿ.ನೀಲರಡ್ಡಿ ಹಾಗೂ ವಕೀಲರು, ಸಂಧಾನಕಾರರು, ಪಕ್ಷಗಾರರು ಹಾಗೂ ಎಲ್ಲಾ ನ್ಯಾಯಾಲಯಗಳ ಸಿಬ್ಬಂದಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.