ಗದಗ: ನಗರದ ಹಾತಲಗೇರಿ ನಾಕ ಬಳಿ ಇರುವ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಷಾಢಮಾಸದ ಅಂಗವಾಗಿ ಮಹಾಲಕ್ಷ್ಮೀ ದೇವಿಗೆ ಉಡಿ ತುಂಬುವ ಕಾರ್ಯಕ್ರಮ ಜುಲೈ 18ರಂದು ನಡೆಯಲಿದೆ.
ಶುಕ್ರವಾರ ಬೆಳಿಗ್ಗೆ 6ರಿಂದ 9 ಗಂಟೆವರೆಗೆ ಸಲ್ಲುವ ಮುಹೂರ್ತದಲ್ಲಿ ಮಹಾಲಕ್ಷ್ಮಿ ದೇವಿಗೆ ರುದ್ರಾಭಿಷೆಕ, ಸಹಸ್ರ ಬಿಲ್ವಾರ್ಚನೆ, ಅಷ್ಟೋತ್ತರ ಶತನಾಮವಳಿ ಪೂಜೆ, ಮಹಾಲಕ್ಷೀ ಅಲಂಕಾರ ಪೂಜೆ, ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 1ಕ್ಕೆ ಮಹಾ ಅನ್ನಸಂತರ್ಪಣೆ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಗದಗ-ಬೆಟಗೇರಿ ಗವಳಿ ಸಮಾಜದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.