ADVERTISEMENT

ಗದಗ:ಇಬ್ಬರು ವಿದ್ಯಾರ್ಥಿಗಳಿಗೆ ಎಚ್‌1ಎನ್‌1

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2018, 12:44 IST
Last Updated 30 ಅಕ್ಟೋಬರ್ 2018, 12:44 IST

ಗದಗ: ಇಲ್ಲಿನ ವೈದ್ಯಕೀಯ ವಿಜ್ಞಾನ ವಿಜ್ಞಾನ ಸಂಸ್ಥೆಯ (ಜಿಮ್ಸ್‌) ಎಂಬಿಬಿಎಸ್‌ ಅಂತಿಮ ವರ್ಷದ ಇಬ್ಬರು ವಿದ್ಯಾರ್ಥಿಗಳಿಗೆ ಎಚ್‌1ಎನ್‌1 ಸೋಂಕು ಇರುವುದು ದೃಢಪಟ್ಟಿದೆ. ವಿದ್ಯಾರ್ಥಿಗಳಿಗೆ ‘ಜಿಮ್ಸ್‌’ನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸೋಂಕು ತಗುಲಿರುವ ವಿದ್ಯಾರ್ಥಿಗಳಿಬ್ಬರು ಕಳೆದೊಂದು ವಾರದಿಂದ ಜ್ವರ, ಕೆಮ್ಮು, ಗಂಟಲು ಉರಿತ, ಮೈ–ಕೈ ನೋವಿನಿಂದ ಬಳಲುತ್ತಿದ್ದರು. ಹೊರ ರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಎಚ್‌1ಎನ್‌1 ಶಂಕೆ ಹಿನ್ನೆಲೆಯಲ್ಲಿ ವೈದ್ಯರು ಈ ಇಬ್ಬರು ವಿದ್ಯಾರ್ಥಿಗಳ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಮಣಿಪಾಲದ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.

‘ಸೋಮವಾರ ಪ್ರಯೋಗಾಲದ ವರದಿ ಬಂದಿದ್ದು, ಸೋಂಕು ಇರುವುದರಿಂದ ದೃಢಪಟ್ಟಿದೆ. ತಕ್ಷಣವೇ ಇಬ್ಬರನ್ನೂ ಒಳರೋಗಿಗಳಾಗಿ ದಾಖಲಿಸಿಕೊಂಡು ಚಿಕಿತ್ಸೆ ಮುಂದುವರಿಸಿದ್ದೇವೆ. ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ’ಎಂದು ‘ಜಿಮ್ಸ್‌’ ನಿರ್ದೇಶಕ ಪಿ.ಎಸ್‌. ಬೂಸರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ವಿದ್ಯಾರ್ಥಿಗಳ ಹೆಸರು ಮತ್ತು ಊರಿನ ಮಾಹಿತಿ ಬಹಿರಂಗಪಡಿಸಲು ಅವರು ನಿರಾಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.