
ಗದಗ: ‘ಸರ್ಕಾರಿ ನೌಕರರ ಬಳಗ ವಿಶ್ವಾಸವಿಟ್ಟು ಜಿಲ್ಲಾಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದರಿಂದಲೇ ಕಿರಿಯ ವಯಸ್ಸಿನಲ್ಲೇ ಕರ್ನಾಟಕ ರಾಜ್ಯ ನೌಕರರ ಸಂಘದ ಉಪಾಧ್ಯಕ್ಷನಾಗಿ ನೇಮಕಗೊಳ್ಳಲು ಕಾರಣವಾಗಿದೆ’ ಎಂದು ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳ್ಳಾರಿ ಹೇಳಿದರು.
ಕರ್ನಾಟಕ ರಾಜ್ಯ ನೌಕರರ ಸಂಘಕ್ಕೆ ರಾಜ್ಯ ಉಪಾಧ್ಯಕ್ಷರಾಗಿ ನಾಮನಿರ್ದೇಶನಗೊಂಡ ಪ್ರಮಾಣ ಪತ್ರವನ್ನು ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರಿಂದ ಸ್ವೀಕರಿಸಿ ಮಾತನಾಡಿ, ‘ನನ್ನ ಮೇಲೆ ನಂಬಿಕೆಯಿಟ್ಟು ವಹಿಸಿದ ಜವಾಬ್ದಾರಿಯನ್ನು ಯಾವುದೇ ಚ್ಯುತಿ ಬರದಂತೆ ನಿರ್ವಹಿಸುತ್ತೇನೆ. ನೌಕರರ ಹಿತರಕ್ಷಣೆಯೇ ನನ್ನ ಮೊದಲ ಆದ್ಯತೆಯಾಗಿದೆ’ ಎಂದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗದಗ ಜಿಲ್ಲಾ ಘಟಕದ ಅಧ್ಯಕ್ಷನಾಗಿ, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷನಾಗಿ ನೌಕರರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟ ರಾಜ್ಯ ಘಟಕದ ಅಧ್ಯಕ್ಷ ಸಿಎಸ್.ಷಡಾಕ್ಷರಿ ಸೇರಿದಂತೆ ರಾಜ್ಯ ಘಟಕದ ಎಲ್ಲ ಹಿರಿ ಕಿರಿಯ ಪದಾಧಿಕಾರಿಗಳಿಗೆ, ಗದಗ ಜಿಲ್ಲಾ ಘಟಕದ ಪದಾಧಿಕಾರಿಗಳಿಗೆ ಆಭಾರಿಯಾಗಿರುವೆ ಎಂದರು.
ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಸೇರಿದಂತೆ ರಾಜ್ಯ ಘಟಕದ ಗೌರವ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.