ADVERTISEMENT

ಗದಗ | ಜಲ ನಿರ್ವಹಣೆಗೆ ನೀತಿ ನಿರೂಪಣೆ ಅಗತ್ಯ: ಪ್ರೊ. ಎಸ್‌.ವಿ.ನಾಡಗೌಡರ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2025, 5:24 IST
Last Updated 16 ಅಕ್ಟೋಬರ್ 2025, 5:24 IST
ಗದುಗಿನ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿಶ್ವವಿದ್ಯಾಲಯದಲ್ಲಿ ಬುಧವಾರ ಆರಂಭಗೊಂಡ ಮೂರು ದಿನಗಳ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಪ್ರಭಾರ ಕುಲಪತಿ ಪ್ರೊ. ಎಸ್‌.ವಿ.ನಾಡಗೌಡರ ಉದ್ಘಾಟಿಸಿದರು
ಗದುಗಿನ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿಶ್ವವಿದ್ಯಾಲಯದಲ್ಲಿ ಬುಧವಾರ ಆರಂಭಗೊಂಡ ಮೂರು ದಿನಗಳ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಪ್ರಭಾರ ಕುಲಪತಿ ಪ್ರೊ. ಎಸ್‌.ವಿ.ನಾಡಗೌಡರ ಉದ್ಘಾಟಿಸಿದರು   

ಗದಗ: ‘ನೀರು ನಮ್ಮ ಜೀವನಕ್ಕೆ ಅತ್ಯವಶ್ಯಕ. ಅದನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ. ಶಾಶ್ವತ ಭೂಗರ್ಭಜಲ ನಿರ್ವಹಣೆಗಾಗಿ ವಿಜ್ಞಾನಾಧಾರಿತ ನೀತಿ ನಿರೂಪಣೆ ಮತ್ತು ಸಾಮಾಜಿಕ ಜಾಗೃತಿ ಅಗತ್ಯ’ ಎಂದು ಪ್ರಭಾರ ಕುಲಪತಿ ಪ್ರೊ. ಎಸ್‌.ವಿ.ನಾಡಗೌಡರ ಹೇಳಿದರು.

ರಾಯ್‌ಪುರದ ರಾಜೀವ್ ಗಾಂಧಿ ರಾಷ್ಟ್ರೀಯ ಭೂಗರ್ಭಜಲ ತರಬೇತಿ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಕೇಂದ್ರೀಯ ಭೂಗರ್ಭಜಲ ಮಂಡಳಿಯ ಸಹಯೋಗದಲ್ಲಿ ನಗರದ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿಶ್ವವಿದ್ಯಾಲಯದಲ್ಲಿ ಬುಧವಾರ ಆರಂಭಗೊಂಡ ಶಾಶ್ವತ ಭೂಗರ್ಭಜಲ ಅಭಿವೃದ್ಧಿ ಮತ್ತು ಭೂಗರ್ಭಜಲ ಸಂಪನ್ಮೂಲಗಳ ನಿರ್ವಹಣೆ ಕುರಿತಾದ ಮೂರು ದಿನಗಳ ರಾಷ್ಟ್ರೀಯ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೇಂದ್ರೀಯ ಭೂಗರ್ಭಜಲ ಮಂಡಳಿಯ ಪ್ರಾದೇಶಿಕ ನಿರ್ದೇಶಕ ಜಿ. ಕೃಷ್ಣಮೂರ್ತಿ ಅವರು, ಭೂಗರ್ಭಜಲದ ಲಭ್ಯತೆ, ಅದರ ಚಲನೆ ಹಾಗೂ ಅಭಿವೃದ್ಧಿ ಸಾಧ್ಯತೆಗಳ ವಿಶ್ಲೇಷಣೆಗೆ ಈ ಯೋಜನೆ ಹೇಗೆ ಸಹಕಾರಿಯಾಗಿದೆ ಎಂಬುದನ್ನು ವಿವರಿಸಿದರು.

ADVERTISEMENT

ತರಬೇತಿ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಅಧ್ಯಾಪಕರು, ಸಂಶೋಧಕರು ಹಾಗೂ ಜಿಯೋಇನ್ಫರ್ಮ್ಯಾಟಿಕ್ಸ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಅ.17ರವರೆಗೆ ತಜ್ಞರಿಂದ ತರಗತಿಗಳು, ಪ್ರಾಯೋಗಿಕ ಪ್ರದರ್ಶನಗಳು ಹಾಗೂ ಕ್ಷೇತ್ರ ಅಧ್ಯಯನ ಕಾರ್ಯಕ್ರಮಗಳು ನಡೆಯಲಿವೆ.

ಡಾ. ಕೆ.ಲೋಕೇಶ್, ಡಾ. ಅಬ್ದುಲ್ ಅಜೀಜ್ ಮುಲ್ಲಾ, ಎಚ್.ಪಿ. ಜಯಪ್ರಕಾಶ್ ಮತ್ತು ಡಾ. ಜೆ.ದೇವಿತುರಾಜ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.