ADVERTISEMENT

ಗದಗ | ಭಾರತ ಪೋಲಿಯೊ ಮುಕ್ತ ದೇಶ: ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2025, 5:53 IST
Last Updated 22 ಡಿಸೆಂಬರ್ 2025, 5:53 IST
ಗದಗ ನಗರದ ದುಂಡಪ್ಪ ಮಾನ್ವಿ ಹೆರಿಗೆ ಆಸ್ಪತ್ರೆಯಲ್ಲಿ ಭಾನುವಾರ ನಡೆದ ಪೋಲಿಯೊ ಲಸಿಕೆ ಅಭಿಯಾನಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಚಾಲನೆ ನೀಡಿದರು
ಗದಗ ನಗರದ ದುಂಡಪ್ಪ ಮಾನ್ವಿ ಹೆರಿಗೆ ಆಸ್ಪತ್ರೆಯಲ್ಲಿ ಭಾನುವಾರ ನಡೆದ ಪೋಲಿಯೊ ಲಸಿಕೆ ಅಭಿಯಾನಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಚಾಲನೆ ನೀಡಿದರು   

ಗದಗ: ‘ಭಾರತ ಪೋಲಿಯೊ ಮುಕ್ತ ದೇಶವಾಗಿದೆ. ನೆರೆಯ ದೇಶಗಳಲ್ಲಿ ಪೋಲಿಯೊ ಜೀವಂತವಾಗಿರುವ ಕಾರಣ ನಮ್ಮ ಮರುಕಳಿಸುವ ಸಾಧ್ಯತೆ ಇದೆ. ಮಕ್ಕಳಿಗೆ ಎರಡು ಹನಿ ಪೋಲಿಯೊ ಲಸಿಕೆ ಹಾಕಿಸಿ, ಅವರನ್ನು ರಕ್ಷಿಸಬೇಕು’ ಎಂದು ಶಾಸಕ ಎಸ್.ವಿ. ಸಂಕನೂರ ಹೇಳಿದರು.

ನಗರದ ದುಂಡಪ್ಪ ಮಾನ್ವಿ ಹೆರಿಗೆ ಆಸ್ಪತ್ರೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರೋಟರಿ ಕ್ಲಬ್ ವತಿಯಿಂದ ಭಾನುವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನದಲ್ಲಿ ಮಾತನಾಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉಪ ನಿರ್ದೇಶಕಿ ಡಾ.ನಂದಿನಿ ಬಿ. ಮಾತನಾಡಿ, ‘ರಾಷ್ಟ್ರೀಯ ಪೋಲಿಯೊ ಅಭಿಾನ ದೇಶದಾದ್ಯಂತ ನಡೆಯುತ್ತಿದೆ. ಮಕ್ಕಳಿಗೆ ಪೋಲಿಯೊ ಲಸಿಕೆ ನೀಡುವುದರಿಂದ ರೋಗ ತಡೆಯಬಹುದು’ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ ಡಾ.ಎಸ್.ಎಸ್.ನೀಲಗುಂದ ಮಾತನಾಡಿದರು. ಡಾ.ಮೀನಾಕ್ಷಿ ಕೆ.ಎಸ್., ಡಾ.ಬಿ.ಸಿ ಕರಿಗೌಡ್ರ, ಡಾ.ರಾಜೇಂದ್ರ, ಡಾ.ಶ್ರೀಧರ ಕುರಡಗಿ, ಡಾ.ಅರುಂಧತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರೀತ್ ಖೋನಾ, ಡಾ.ಶೇಖರ ಸಜ್ಜನ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.