ADVERTISEMENT

ಗದಗ | ಪತ್ರಿಕಾ ವಿತರಕರಿಗೆ ಆರ್ಥಿಕ ಭದ್ರತೆ ಒದಗಿಸಿ: ಆಗ್ರಹ

ಅಖಿಲ ಕರ್ನಾಟಕ ಪತ್ರಿಕಾ ವಿತರಕರ ದಿನ ಆಚರಣೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2025, 5:18 IST
Last Updated 5 ಸೆಪ್ಟೆಂಬರ್ 2025, 5:18 IST
ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಗದಗ ಜಿಲ್ಲಾ ಘಟಕದಿಂದ ಗುರುವಾರ ನಗರದ ವೀರೇಶ್ವರ ಪುಣ್ಯಾಶ್ರಮದ ಆವರಣದಲ್ಲಿ ಅಖಿಲ ಕರ್ನಾಟಕ ಪತ್ರಿಕಾ ವಿತರಕರ ದಿನ ಆಚರಿಸಲಾಯಿತು 
ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಗದಗ ಜಿಲ್ಲಾ ಘಟಕದಿಂದ ಗುರುವಾರ ನಗರದ ವೀರೇಶ್ವರ ಪುಣ್ಯಾಶ್ರಮದ ಆವರಣದಲ್ಲಿ ಅಖಿಲ ಕರ್ನಾಟಕ ಪತ್ರಿಕಾ ವಿತರಕರ ದಿನ ಆಚರಿಸಲಾಯಿತು    

ಗದಗ: ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಗದಗ ಜಿಲ್ಲಾ ಘಟಕದ ವತಿಯಿಂದ ಗುರುವಾರ ನಗರದ ವೀರೇಶ್ವರ ಪುಣ್ಯಾಶ್ರಮದ ಆವರಣದಲ್ಲಿ ಅಖಿಲ ಕರ್ನಾಟಕ ಪತ್ರಿಕಾ ವಿತರಕರ ದಿನ ಆಚರಿಸಲಾಯಿತು.

‘ಸಂಕಷ್ಟದಲ್ಲಿರುವ ಪತ್ರಿಕಾ ವಿತರಕರಿಗೆ ಸಹಾಯಧನ, ಜೀವವಿಮೆ, ಬಡ್ಡಿರಹಿತ ಸಾಲ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಸರ್ಕಾರ ನಮ್ಮ ನೆರವಿಗೆ ಬರಬೇಕುʼ ಎಂದು ಪತ್ರಿಕಾ ವಿತರಕರು ಆಗ್ರಹಿಸಿದರು.

‘ನಾವು ಅನಾರೋಗ್ಯಕ್ಕೆ ಒಳಗಾದರೂ ಪತ್ರಿಕೆ ಹಂಚುವುದು ನಿಲ್ಲದು. ಆದರೆ ಅದಕ್ಕೆ ತಕ್ಕ ಪ್ರತಿಫಲ ಮಾತ್ರ ದೊರೆಯದಿರುವುದು ಬೇಸರ ತಂದಿದೆ. ಸರ್ಕಾರ ಪತ್ರಿಕಾ ವಿತರಕರ ಹಿತ ಕಾಯಲು ದೃಢ ನಿಲುವು ತಾಳಬೇಕು’ ಎಂದು ಆಗ್ರಹಿಸಿದರು.

ADVERTISEMENT

ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಂಕರ ಕುದರಿಮೋತಿ, ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೀರಬಸಯ್ಯ ವಿರಕ್ತಮಠ, ಜಿಲ್ಲಾ ಉಪಾಧ್ಯಕ್ಷ ಈರಣ್ಣ ಮಳೇಕರ, ಕಾರ್ಯದರ್ಶಿ ಮಂಜುನಾಥ ಕಬನೂರ, ಸಹ ಕಾರ್ಯದರ್ಶಿ ದತ್ತಾತ್ರೇಯ ಮುಂಡರಗಿ, ಖಜಾಂಚಿ ವಿನಾಯಕ ಬದಿ, ಹಿರಿಯ ಸಲಹೆಗಾರ ಕೆ.ಎಸ್.ಹಿರೇಮಠ, ಪ್ರಮೋದ ಜೋಶಿ, ಸಂಚಾಲಕ ಗಂಗಾಧರ ಮಡ್ಡಿ, ಗಣೇಶ ಶಿರಹಟ್ಟಿ, ಶಂಕರಗುರು ಕಂದಗಲ್ಲ, ಗುರುರಾಜ ಕಲಾಲ, ದಶರಥ ಹೊನ್ನಳ್ಳಿ, ಕಿರಣ ಮಡ್ಡಿ, ಮಾರುತಿ ಮುಂಡರಗಿ ಸೇರಿದಂತೆ ಎಲ್ಲ ಪತ್ರಿಕಾ ವಿತರಕರು ಭಾಗವಹಿಸಿದ್ದರು.

ಪತ್ರಿಕೆ ಹಂಚಿಕೆದಾರಿಗೆ ಯಾವುದೇ ಭದ್ರತೆ ಇಲ್ಲ. ಕೆಲವರು ಈಗಲೂ ಬಡತನದಲ್ಲಿಯೇ ಬದುಕು ಸವೆಸುತ್ತಿದ್ದಾರೆ. ಸರ್ಕಾರ ಆರ್ಥಿಕ ಭದ್ರತೆ ಒದಗಿಸಬೇಕು’ ಎಂದು ಒತ್ತಾಯಿಸಿದರು
ಸಿದ್ದು ಮಡಿವಾಳರ ಸಂಘದ ಮಾಜಿ ಕಾರ್ಯದರ್ಶಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.