
ಗದಗ: ‘ಸಫಾಯಿ ಕರ್ಮಚಾರಿಗಳಿಗೆ ಸರ್ಕಾರ ನೀಡುವ ಸೌಲಭ್ಯ ಸಮರ್ಪಕ ವಿತರಣೆಗೆ ಅಧಿಕಾರಿಗಳು ಕ್ರಮ ವಹಿಸಬೇಕು. ಜಿಲ್ಲೆಯ ಸಪಾಯಿ ಕರ್ಮಚಾರಿಗಳ ಸ್ಥಿತಿಗತಿ ಕುರಿತು ತಾಲ್ಲೂಕು ಮಟ್ಟದಲ್ಲಿ ಪ್ರಗತಿ ಪರಿಶೀಲನೆ ನಡೆಸಲಾಗುವುದು’ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಸಫಾಯಿ ಕರ್ಮಚಾರಿಗಳ ಯೋಜನೆ ಅನುಷ್ಠಾನ ಕುರಿತು ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಫಾಯಿ ಕರ್ಮಚಾರಿಗಳಿಗೆ ನಿಯಮಾನುಸಾರ ಇಎಸ್‌ಐ, ಪಿಎಫ್, ಆರೋಗ್ಯ ತಪಾಸಣೆ, ಸುರಕ್ಷತೆ ಸಾಧನ ಸೇರಿದಂತೆ ವಿವಿಧ ಸೌಲಭ್ಯ ವಿತರಣೆಗೆ ಕ್ರಮ ವಹಿಸಬೇಕು’ ಎಂದು ಸೂಚಿಸಿದರು.
ಸಫಾಯಿ ಕರ್ಮಚಾರಿ ಸಮಿತಿ ಸದಸ್ಯ ರಮೇಶ್ ಕೊಳೂರ ಮಾತನಾಡಿ, ‘ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ವಿತರಿಸಬೇಕು’ ಎಂದು ಆಗ್ರಹಿಸಿದರು.
ಜಿಲ್ಲಾ ಸಮಾಜ ಕಲ್ಯಾಣ ಉಪನಿರ್ದೇಶಕಿ ನಂದಾ ಹಣಬರಟ್ಟಿ ಅವರು ಪ್ರಗತಿ ಪರಿಶೀಲನೆ ವರದಿ ಮಂಡಿಸಿದರು. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.