
ಪ್ರಜಾವಾಣಿ ವಾರ್ತೆ
ಗದಗ: ನಗರದ ಶಿವಾನಂದ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ಪಾದಗಟ್ಟೆವರೆಗೆ ನಡೆದ ಮಹಾರಥೋತ್ಸವದಲ್ಲಿ ಗದಗ- ಬೆಟಗೇರಿ ಅವಳಿ ನಗರ ಸೇರಿದಂತೆ ಸುತ್ತಲಿನ ಹಳ್ಳಿಗಳಿಂದ ಬಂದಿದ್ದ ಸಾವಿರಾರು ಭಕ್ತರು ರಥಕ್ಕೆ ಉತ್ತುತ್ತಿ, ಬಾಳೆಹಣ್ಣು ಎಸೆದು ಜಯಘೋಷ ಮೊಳಗಿಸಿದರು.
ಮಹಾರಥೋತ್ಸವದ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಚಂಡೆ ಮದ್ದಳೆ, ನಂದಿಕೋಲ, ಸಮ್ಮಾಳ ಮೇಳ, ವಿವಿಧ ಭಜನಾ ಮೇಳಗಳು ಭಾಗವಹಿಸಿ, ಮೆರುಗು ಹೆಚ್ಚಿಸಿದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.