
ಗದಗ: ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಬುಧವಾರ ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಶಿವಯೋಗಿ ಸಿದ್ಧರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಪೂಜೆ ಸಲ್ಲಿಸಿದರು.
ಅಪರ ಜಿಲ್ಲಾಧಿಕಾರಿ ದುರಗೇಶ್ ಕೆ.ಆರ್, ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎಂ.ತುಂಬರಮಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ವ್ಹಿ.ಬಳ್ಳಾರಿ ಎಚ್.ವೈ.ಸಂದಕದ, ರವಿ ಗುಂಜೀಕರ್, ವಿದ್ಯಾಧರ ದೊಡ್ಡಮನಿ, ಚಿನ್ನಪ್ಪ ವಡ್ಡಟ್ಟಿ, ವೆಂಕಟೇಶ ಗೆಜ್ಜಿ, ಆಂಜನೇಯ ಕಟಗಿ, ನಾಗರಡ್ಡಿ ನಿಡಗುಂದಿ, ಸಹದೇವ ಕೋಟಿ, ರಾಘವೇಂದ್ರ ವಿ.ಎಸ್, ತಿಮ್ಮಣ್ಣ ಡೋಣಿ, ವಿಜಯ ಗಿಂಜಿ, ರವಿ ಕೋಟಿ ಸೇರಿದಂತೆ ಗಣ್ಯರು, ಹಿರಿಯರು ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.