ADVERTISEMENT

ಗಜೇಂದ್ರಗಡ | ‘ಸಾರ್ವಜನಿಕರ ಸಹಕಾರದಿಂದ ಮಲೇರಿಯಾ ಮುಕ್ತ’

​ಪ್ರಜಾವಾಣಿ ವಾರ್ತೆ
Published 28 ಜೂನ್ 2025, 16:06 IST
Last Updated 28 ಜೂನ್ 2025, 16:06 IST
ಗಜೇಂದ್ರಗಡದ ಭಗವಾನ್‌ ಮಹಾವೀರ ಜೈನ್‌ ಆಯುರ್ವೇದಿಕ್‌ ಮೆಡಿಕಲ್‌ ಕಾಲೇಜಿನಲ್ಲಿ ನಡೆದ ತಾಲ್ಲೂಕು ಮಟ್ಟದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಎಚ್.ಎಲ್.ಗಿರಡ್ಡಿ ಮಾತನಾಡಿದರು
ಗಜೇಂದ್ರಗಡದ ಭಗವಾನ್‌ ಮಹಾವೀರ ಜೈನ್‌ ಆಯುರ್ವೇದಿಕ್‌ ಮೆಡಿಕಲ್‌ ಕಾಲೇಜಿನಲ್ಲಿ ನಡೆದ ತಾಲ್ಲೂಕು ಮಟ್ಟದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಎಚ್.ಎಲ್.ಗಿರಡ್ಡಿ ಮಾತನಾಡಿದರು   

ಗಜೇಂದ್ರಗಡ: ‘ಆರೋಗ್ಯ ಇಲಾಖೆ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಮಲೇರಿಯಾ ನಿರ್ಮೂಲನೆಗೊಳಿಸಿ ಮಲೇರಿಯಾ ಮುಕ್ತ ತಾಲ್ಲೂಕು ಮಾಡಲು ಸಾರ್ವಜನಿಕರು ಸಹಕಾರ ನೀಡಬೇಕು’ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಚ್.ಎಲ್.ಗಿರಡ್ಡಿ ಹೇಳಿದರು.

ಪಟ್ಟಣದ ಭಗವಾನ್‌ ಮಹಾವೀರ ಜೈನ್‌ ಆಯುರ್ವೇದಿಕ್‌ ಮೆಡಿಕಲ್‌ ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳ ಕಾರ್ಯಾಲಯ, ಜಿಲ್ಲಾ ಸಮೀಕ್ಷಣಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ಮಾಹಿತಿ ಶಿಕ್ಷಣ ಸಂವಹನ ವಿಭಾಗ, ರೋಣ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಹಾಗೂ ಭಗವಾನ್‌ ಮಹಾವೀರ ಜೈನ್‌ ಆಯುರ್ವೇದಿಕ್‌ ಮೆಡಿಕಲ್‌ ಕಾಲೇಜು ಇವರುಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಡಾ.ಬಿ.ವಿ.ಕಂಬಳ್ಯಾಳ ಮಾತನಾಡಿ, ‘ಮಳೆಗಾಲ ಆರಂಭ ಆಗಿರುವುದರಿಂದ ಕಾಯಿಲೆ ಹರಡುವ ಸಾಧ್ಯತೆಯಿದೆ. ಸೊಳ್ಳೆಗಳ ನಿಯಂತ್ರಣಕ್ಕಾಗಿ ಜೈವಿಕ ನಿಯಂತ್ರಣ ಮತ್ತು ರಾಸಾಯನಿಕ ವಿಧಾನಗಳು ಲಭ್ಯವಿದ್ದು, ಆರೋಗ್ಯ ಇಲಾಖೆ ಸಲಹೆ ಸಹಕಾರದೊಂದಿಗೆ ಸೊಳ್ಳೆಗಳನ್ನು ನಿಯಂತ್ರಿಸಲು ಸಾಧ್ಯ’ ಎಂದರು.

ADVERTISEMENT

ಡಾ.ಪಿ.ವಿ.ಭಾಂಡಗೆ, ಸೂಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶರಣು ಗಾಣಿಗೇರ, ಜಿಲ್ಲಾ ಕೀಟ ಶಾಸ್ತ್ರಜ್ಞೆ ಅನ್ನಪೂರ್ಣ ಶಟ್ಟರ್‌ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ಡಾ.ಎನ್.ಹೆಚ್.ಕುಲಕರ್ಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಚಿಕ್ಕ ಮಕ್ಕಳ ತಜ್ಞ ಡಾ.ಲಿಂಗರಡ್ಡಿ ತಿರಕಣ್ಣವರ, ವಿಶ್ವ ಆರೋಗ್ಯ ಸಂಸ್ಥೆಯ ಕ್ಷಯ ರೋಗ ಗದಗ ಜಿಲ್ಲಾ ಸಲಹೆಗಾರ ಡಾ.ಸತೀಶ ಘಾಟಿಗೆ, ಆಯುಷ್ ವೈದ್ಯರ ಸಂಘದ ಅಧ್ಯಕ್ಷ ಡಾ.ಎಲ್.ಸಿ.ಬಾಗಲಕೋಟ, ಡಾ.ಗಿರೀಶಶಾಸ್ತ್ರಿ ಜೀರೆ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಕೆ.ಎ.ಹಾದಿಮನಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮನೋಹರ ಕಣ್ಣಿ, ಪ್ರಭುರಾಜ ಹಾದಿಮನಿ, ಕೆ.ಎ.ಬೂದಿಹಾಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.