ನರಗುಂದ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಮಂಗಳವಾರ ಸಂಜೆ ಗುಡುಗು, ಸಿಡಿಲು ಸಹಿತ ಮಳೆ ಜೋರಾಗಿ ಸುರಿಯಿತು. ಬಿಸಿಲಿನಿಂದ ಬಸವಳಿದ ಜನತೆ ನಿಟ್ಟುಸಿರು ಬಿಟ್ಟರು. ಮಳೆಗಾಗಿ ಕಾಯುತ್ತಿದ್ದ ರೈತರಿಗೆ ಮಂಗಳವಾರದ ಮಳೆ ಹರ್ಷ ತಂದಿದೆ. ಮುಂಗಾರು ಬಿತ್ತನೆಗೆ ಭೂಮಿ ಹದ ಮಾಡಲು ಅನುಕೂಲ ಕಲ್ಪಿಸಿದಂತಾಗಿದೆ. ಇದೇ ರೀತಿ ಮಳೆ ಮುಂದಿನ ಎರಡು ವಾರಗಳಲ್ಲಿ ಜೋರಾಗಿ ಸುರಿಯಬೇಕು ಎಂದು ರೈತರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.