ADVERTISEMENT

ರೋಣ | 'ಸರ್ಕಾರಿ ಶಾಲೆಗಳ ಕಾಯಕಲ್ಪಕ್ಕೆ ಸಂಕಲ್ಪ'

ಕಾಮಗಾರಿ ಭೂಮಿಪೂಜೆ: ಶಾಸಕ ಜಿ.ಎಸ್. ಪಾಟೀಲ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2025, 14:31 IST
Last Updated 28 ಜೂನ್ 2025, 14:31 IST
ರೋಣ ಪಟ್ಟಣದ ಎಮ್.ಆರ್.ಬಿ.ಸಿ ಕಾಲೋನಿಯ ಸರ್ಕಾರಿ ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕ ಜಿ.ಎಸ್.ಪಾಟೀಲ ಭೂಮಿಪೂಜೆ ನೆರವೇರಿಸಿದರು
ರೋಣ ಪಟ್ಟಣದ ಎಮ್.ಆರ್.ಬಿ.ಸಿ ಕಾಲೋನಿಯ ಸರ್ಕಾರಿ ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕ ಜಿ.ಎಸ್.ಪಾಟೀಲ ಭೂಮಿಪೂಜೆ ನೆರವೇರಿಸಿದರು   

ರೋಣ: ‘ವಿಧಾನಸಭಾ ಮತಕ್ಷೇತ್ರದ ಗ್ರಾಮೀಣ ಭಾಗದ ಎಲ್ಲ ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ಕಲ್ಪಿಸುವ ದೃಢ ಸಂಕಲ್ಪ ಮಾಡಿದ್ದೇನೆ’ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಪಟ್ಟಣದ ಎಂ.ಆರ್.ಬಿ.ಸಿ ಕಾಲೋನಿಯ ಸರ್ಕಾರಿ ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿ ಭೂಮಿಪೂಜೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ‘ಕರ್ನಾಟಕ ಸರ್ಕಾರ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಗೆ ಸಾಕಷ್ಟು ಅನುದಾನ ಒದಗಿಸಿದೆ. ಕ್ಷೇತ್ರದ ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲ ಸೌಕರ್ಯ ಹಾಗೂ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಪುನರ್‌ ನವೀಕರಣಕ್ಕೆ ಸಂಕಲ್ಪ ಮಾಡಿದ್ದೇನೆ’ ಎಂದರು.

ಮುಖ್ಯಮಂತ್ರಿಗಳು ಕ್ಷೇತ್ರದ ಅಭಿವೃದ್ಧಿಗೆ ನೀಡಿದ ₹ 25 ಕೋಟಿ ಅನುದಾನದಲ್ಲಿ ಶಾಲೆಗಳ ಅಭಿವೃದ್ಧಿಗೆ ₹ 3 ಕೋಟಿ ಮೀಸಲಿಡಸಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಗ್ರಾಮೀಣ ಭಾಗದ ಶಾಲೆಗಳಿಗೆ ಹೆಚ್ಚಿನ ಮಹತ್ವ ನೀಡಿದ್ದು, ಸರ್ಕಾರಿ ಶಾಲೆಗಳಿಗೂ ವಿಶೇಷ ಒತ್ತು ನೀಡಲಾಗುವುದು’ ಎಂದರು.

ADVERTISEMENT

ಕಾಂಗ್ರೆಸ್ ಹಿರಿಯ ಮುಖಂಡರಾದ ವ್ಹಿ.ಆರ್.ಗುಡಿಸಾಗರ, ಬಸವರಾಜ ನವಲಗುಂದ, ಪುರಸಭೆ ಅಧ್ಯಕ್ಷೆ ಬಸಮ್ಮ ಕೊಪ್ಪದ, ಉಪಾಧ್ಯಕ್ಷ ಹನುಮಂತ ತಳ್ಳಿಕೇರಿ, ರೋಣ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ ಪಾಟೀಲ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಅಕ್ಷಯ ಪಾಟೀಲ, ವಿದ್ಯಾ ದೊಡ್ಡಮನಿ, ನಾಜಬೇಗಂ ಯಲಿಗಾರ, ಸಂಜಯ ದೊಡ್ಡಮನಿ, ಈಶ್ವರ ಕಡಬಿನಕಟ್ಟಿ, ಮಲ್ಲಿಕ ಯಲಿಗಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.