ಕಡತ
(ಸಾಂದರ್ಭಿಕ ಚಿತ್ರ)
ಗದಗ: 2025-26ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ (ಡಿಎಚ್ಟಿಟಿ) ಡಿಪ್ಲೊಮಾ ಕೋರ್ಸ್ ಕಲಿಕೆಗಾಗಿ ವಿವಿಧ ಕಾಲೇಜುಗಳಿಗೆ 39 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ₹2,500 ಶಿಷ್ಯವೇತನ ನೀಡಲಾಗುವುದು. ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.
ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
1-7-2025ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15ರಿಂದ 23ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15ರಿಂದ 25ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಡೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಲಿದೆ.
2025-26ನೇ ಸಾಲಿಗೆ ಮೂರು ವರ್ಷದ ಡಿಪ್ಲೊಮಾ ಕೋರ್ಸ್ಗಾಗಿ ಲಭ್ಯವಿರುವ ಅಭ್ಯರ್ಥಿಗಳ ಸಂಖ್ಯೆ ಮತ್ತು ಸಂಸ್ಥೆಗಳ ವಿವರ:. ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, (22 ಅಭ್ಯರ್ಥಿಗಳು) ಗದಗ-ಬೆಟಗೇರಿ, ಕರ್ನಾಟಕ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ (12 ಅಭ್ಯರ್ಥಿಗಳು), ಸೇಲಂ, ತಮಿಳುನಾಡು. ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ (3 ಅಭ್ಯರ್ಥಿಗಳು), ವೆಂಕಟಗಿರಿ ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ (2 ಅಭ್ಯರ್ಥಿಗಳು), ಕಣ್ಣೂರು ಕೇರಳ.
ಮಾಹಿತಿಗೆ: 08372-259664, 9449162822 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.