
ಗಜೇಂದ್ರಗಡ: ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಲೋಕಾಯುಕ್ತ ಡಿಎಸ್‌ಪಿ ವಿಜಯ ಬಿರಾದಾರ ಅಧ್ಯಕ್ಷತೆಯಲ್ಲಿ ಬುಧವಾರ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಸಭೆ ನಡೆಯಿತು.
ಸಭೆಯಲ್ಲಿ ಲೋಕಾಯುಕ್ತ ಡಿಎಸ್‌ಪಿ ವಿಜಯ ಬಿರಾದಾರ ಮಾತನಾಡಿ, ‘ಸಾರ್ವಜನಿಕರು ನೀಡುವ ದೂರುಗಳು ಅಥವಾ ಮನವಿಗಳಿಗೆ ಅಧಿಕಾರಿಗಳು ಸಕಾಲದಲ್ಲಿ ಪರಿಹಾರ ನೀಡಲು ಮುಂದಾಗಬೇಕು. ಸಮಸ್ಯೆ ಹೊತ್ತು ಕಚೇರಿಗೆ ಬರುವ ಸಾರ್ವಜನಿಕರನ್ನು ಅಲೆದಾಡಿಸದೇ ಸಕಾಲದಲ್ಲಿ ಅರ್ಜಿಗಳ ವಿಲೇವಾರಿ ಮಾಡಬೇಕು. ಮಹಿಳಾ ಹಾಸ್ಟೆಲ್‌ಗಳಲ್ಲಿ ಮಹಿಳಾ ವಾರ್ಡನ್‌ಗಳ ನೇಮಕಕ್ಕೆ ಆದ್ಯತೆ ನೀಡುವ ಜೊತೆಗೆ ಶೌಚಾಲಯಗಳು ಸುಸ್ಥಿತಿಯಲ್ಲಿರಿಸಬೇಕು. ಗಜೇಂದ್ರಗಡದಲ್ಲಿರುವ ಹೊಸ ಬಡಾವಣೆಗಳಲ್ಲಿಯ ಜನರಿಗೆ ಮೂಲ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.
ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ರವಿ ಪುರುಷೋತ್ತಮ ಮಾತನಾಡಿದರು. ‘ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಪುರಸಭೆ ಸೇರಿದಂತೆ ವಿವಿಧ ಇಲಾಖೆಗಳ ಸಮಸ್ಯೆಗಳನ್ನು ಹೊತ್ತು 9 ಮಂದಿ ಅಹವಾಲು ಸಲ್ಲಿಸಿದ್ದಾರೆ. ಅವುಗಳ ಪರಿಹಾರಕ್ಕೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಕ್ತ ಉತ್ತರ ನೀಡಲು ಸೂಚಿಸಲಾಗಿದೆʼ ಎಂದರು.
ಸಭೆಯಲ್ಲಿ ಕಂದಾಯ ಇಲಾಖೆಯ ವಿ.ಡಿ. ಮಾಲಿಪಾಟೀಲ, ತಾಲ್ಲೂಕು ಪಂಚಾಯಿತಿ ಇಒ ಡಾ.ಡಿ.ಮೋಹನ, ಪುರಸಭೆ ಪ್ರಭಾರಮುಖ್ಯಾಧಿಕಾರಿ ಬಸವರಾಜ ಬಳಗಾನೂರ, ಶಿಕ್ಷಣ ಇಲಾಖೆಯ ಎಂ.ಎ. ಫಣಿಬಂದ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರವಿಂದ್ರಗೌಡ ಪಾಟೀಲ, ಹೆಸ್ಕಾಂ ಸಹಾಯಕ ಕಾರ್ಯನಿವಾರ್ಹಕ ೆಂಜಿನಿಯರ್ ವೀರೇಶ ರಾಜೂರ, ತೋಟಗಾರಿಕೆ ಇಲಾಖೆಯ ಮಹಾಂತೇಶ ಅಂಟಿನ, ಸಮಾಜ ಕಲ್ಯಾಣ ಇಲಾಖೆಯ ಶಿವಾನಂದ ಹರ್ತಿ, ಪಶು ವೈದ್ಯಾಧಿಕಾರಿ ಜಯಶ್ರೀ ಪಾಟೀಲ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.