ADVERTISEMENT

ತ್ರೈಮಾಸಿಕ ಪರಿಶೀಲನಾ ಸಮಿತಿ: ಅಧಿಕಾರೇತರ ಸದಸ್ಯರ ನೇಮಕ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2024, 16:09 IST
Last Updated 26 ಸೆಪ್ಟೆಂಬರ್ 2024, 16:09 IST
ಮಕಾನದಾರ
ಮಕಾನದಾರ   

ಗದಗ: ಜಿಲ್ಲಾ ಮಟ್ಟದ ತ್ರೈಮಾಸಿಕ ಪರಿಶೀಲನಾ ಸಮಿತಿಗೆ (ಕೆ.ಡಿ.ಪಿ) ಅಧಿಕಾರೇತರ ಸದಸ್ಯರ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಡಿ.ಆರ್. ಪಾಟೀಲ, ಎಸ್. ಎನ್. ಬಳ್ಳಾರಿ, ಪ್ರಭು ವಿ. ಮೇಟಿ, ಎಸ್.ಡಿ. ಮಕಾನದಾರ ಹಾಗೂ ಶಾರದಾ ಹಿರೇಗೌಡ್ರ ಅವರನ್ನು ಗದಗ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಮಿತಿಗೆ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧಿಕಾರೇತರ ಸದಸ್ಯರರನ್ನಾಗಿ ನಾಮ ನಿರ್ದೇಶನಗೊಳಿಸಿ ಆದೇಶಿಸಿದೆ.

ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿನಾಥ ಈ ಆದೇಶ ಹೊರಡಿಸಿದ್ದಾರೆ.

ADVERTISEMENT
ಡಿ.ಆರ್‌.ಪಾಟೀಲ
ಎಸ್‌.ಎನ್‌.ಬಳ್ಳಾರಿ
ಪ್ರಭು ಮೇಟಿ
ಶಾರದಾ ಹಿರೇಗೌಡ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.