ಪ್ರಾತಿನಿಧಿಕ ಚಿತ್ರ
ಗಜೇಂದ್ರಗಡ: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಗುರುವಾರ ಸಂಜೆ ಒಂದು ಗಂಟೆಗೂ ಅಧಿಕ ರಭಸವಾಗಿ ಮಳೆ ಸುರಿಯಿತು.
ಪಟ್ಟಣ ಸೇರಿದಂತೆ ಸುತ್ತಲಿನ ಹಲವು ಗ್ರಾಮಗಳಲ್ಲಿ ಸಂಜೆ 3 ಗಂಟೆ ಸುಮಾರಿಗೆ ಆರಂಭವಾದ ಮಳೆ ಒಂದು ಗಂಟೆಗೂ ಅಧಿಕ ರಭಸವಾಗಿ ಸುರಿಯಿತು. ಬಳಿಕ ಸಂಜೆ 6 ಗಂಟೆವರೆಗೆ ಜಿಟಿ ಜಿಟಿ ಮಳೆ ಸುರಿಯಿತು.
ತಾಲ್ಲೂಕಿನಲ್ಲಿ ಕಳೆದ ಹಲವು ದಿನಗಳಿಂದ ಮಳೆ ಕಣ್ಮರೆಯಾಗಿದ್ದರಿಂದ ಹೆಸರು, ಗೋವಿನಜೋಳ, ಹತ್ತಿ ಬೆಳೆಗಳು ಒಣಗಿ ಹಾಳಾಗುವ ಹಂತಕ್ಕೆ ತಲುಪಿದ್ದವು. ಗೋವಿನಜೋಳ ಬೆಳೆಗಳು ತೇವಾಂಶ ಕೊರತೆಯಿಂದ ಚೋಟುದ್ದ ಬೆಳೆದು ಜುಟ್ಟ ಹಾಕಿವೆ. ಗುರುವಾರ ಸುರಿದ ಮಳೆಯಿಂದ ಬೆಳೆಗಳಿಗೆ ಮರು ಜೀವ ಬಂದಂತಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.