ADVERTISEMENT

ರೋಣ | ಮಾದಕ ದ್ರವ್ಯ ವಿರೋಧಿಸಿ ಜಾಗೃತಿ ಜಾಥಾ

​ಪ್ರಜಾವಾಣಿ ವಾರ್ತೆ
Published 23 ಜೂನ್ 2025, 13:58 IST
Last Updated 23 ಜೂನ್ 2025, 13:58 IST
ರೋಣ ಪಟ್ಟಣದ ಸೂಡಿ ವೃತ್ತದಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಯಿತು
ರೋಣ ಪಟ್ಟಣದ ಸೂಡಿ ವೃತ್ತದಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಯಿತು   

ರೋಣ: ‘ಯುವ ಪೀಳಿಗೆಯಲ್ಲಿ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಅರಿವು ಹಾಗೂ ವ್ಯಸನದಿಂದ ಮುಕ್ತಗೊಳಿಸುವಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಜಾಗೃತಿ ಮುಖ್ಯವಾಗಿದೆ’ ಎಂದು ರೋಣ ಪಿಎಸ್‌ಐ ಪ್ರಕಾಶ ಬಣಕಾರ ಹೇಳಿದರು.

ಸೋಮವಾರ ಪಟ್ಟಣದ ಸೂಡಿ ವೃತ್ತದಲ್ಲಿ ಗದಗ ಜಿಲ್ಲಾ ಪೊಲೀಸ್, ರೋಣ ಪೊಲೀಸ್ ಠಾಣೆ ಇವರ ಸಂಯುಕ್ತ ಆಶ್ರಯದಲ್ಲಿ ನ್ಯೂ ಲಿಟಲ್ ಪ್ಲಾವರ್ ಇಂಗ್ಲೀಷ್‌ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾದಲ್ಲಿ ಮಾತನಾಡಿದರು.

‘ಶಾಲಾ ಕಾಲೇಜುಗಳಿಗೆ ತೆರಳಿ ಮಾದಕ ದ್ರವ್ಯದ ದುಷ್ಪರಿಣಾಮದ ಬಗ್ಗೆ ಅರಿವು ಕಾರ್ಯಕ್ರಮವನ್ನು ಮಾಡಲಾಗಿದೆ. ರಸಪ್ರಶ್ನೆ, ಪ್ರಬಂಧ ಸ್ಪರ್ಧೆ ಸೇರಿದಂತೆ ಹಲವು ಕಾರ್ಯಕ್ರಮ ಮೂಲಕ ಯುವ ಪೀಳಿಗೆಯಲ್ಲಿ ಮಾದಕ ವಸ್ತುಗಳ ಬಗ್ಗೆ ಜಾಗೃತಿ  ಮೂಡಿಲಾಗುತ್ತಿದೆ. ಯುವ ಪೀಳಿಗೆ ಜಾಗೃತಗೊಂಡಾಗ ಮಾತ್ರ ಮಾದಕ ವಸ್ತುಗಳ ಮಾರಾಟಕ್ಕೆ ಕಡಿವಾಣ ಹಾಕಲು ಸಾಧ್ಯ. ಪೊಲೀಸ್ ಇಲಾಖೆಯಿಂದ ಎಲ್ಲ ರೀತಿಯ ಕ್ರಮ  ಕೈಗೊಳ್ಳಲಾಗಿದೆ’ ಎಂದರು.

ADVERTISEMENT

ಅಪರಾದ ವಿಭಾಗದ ಪಿಎಸ್‌ಐ ವೀರಣ್ಣ ಚವಡಿ, ಪೇದೆಗಳಾದ ಮಂಜು ಕುರಿ, ಆನಂದ ಮೇಟಿ, ಮಂಜುನಾಥ ದೊಡ್ಡಮನಿ, ವಿ.ಎಸ್. ರಾಯರ, ಪರಶುರಾಮ ಇಂಗಳೆ, ಶಿವಾನಂದ ಕಡಿ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.