ಗದಗ: ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಿವಕುಮಾರ ರಂಗ ಪ್ರಯೋಗ ಶಾಲೆಯ 2025-26ನೇ ಸಾಲಿನ ರಂಗಶಿಕ್ಷಣಕ್ಕೆ(ಡಿಪ್ಲೊಮಾ ಇನ್ ಡ್ರಾಮಾ ಆರ್ಟ್ಸ್) ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು. ಪದವೀಧರರಿಗೆ ಆದ್ಯತೆ ಸಿಗಲಿದೆ. ರಂಗಭೂಮಿಯಲ್ಲಿ ಆಸಕ್ತಿಯಿದ್ದು ಸ್ವಲ್ಪಮಟ್ಟಿನ ಅನುಭವ ಇರಬೇಕಾದ್ದು ಅಗತ್ಯ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತ ಊಟ, ವಸತಿ ಸೌಲಭ್ಯವಿದೆ.
ರಾಜ್ಯ ಹಾಗೂ ರಾಷ್ಟ್ರಮಟ್ಟದ ರಂಗತಜ್ಞರು ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥ ಭಂಡಾರ ಹಾಗೂ ದೃಶ್ಯ, ಶ್ರವ್ಯ ಪರಿಕರಗಳ ಅನುಕೂಲತೆ ಇದೆ. ರಂಗಶಾಲೆಯ ವಿದ್ಯಾರ್ಥಿಗಳಿಗೆ ಭಾರತೀಯ ರಂಗ ಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಶಿಕ್ಷಣದಲ್ಲಿ ರಂಗಭೂಮಿ ಕುರಿತಾದ ಸೈದ್ದಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ.
ರಂಗಶಾಲೆಯ ವೆಬ್‌ಸೈಟ್ www.theatreschoolsanehalli.orgನಲ್ಲಿ ಪ್ರವೇಶ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಜೂನ್ 25ರೊಳಗೆ ಭರ್ತಿ ಮಾಡಿ ಸಲ್ಲಿಸಬೇಕು.
ಜೂನ್ 27 ಮತ್ತು 28ರಂದು ಸಂದರ್ಶನ ನಡೆಯಲಿದೆ. ಮಾಹಿತಿಗೆ ಶಿವಕುಮಾರ ರಂಗ ಪ್ರಯೋಗ ಶಾಲೆ, ಸಾಣೇಹಳ್ಳಿ- 577515, ಹೊಸದುರ್ಗ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ. ದೂರವಾಣಿ ಸಂಖ್ಯೆ 94483 98144, 88610 43553 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.