ADVERTISEMENT

ಗಜೇಂದ್ರಗಡ: ಕಾಲಕಾಲೇಶ್ವರ ಕಾರ್ತಿಕೋತ್ಸವ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2025, 6:26 IST
Last Updated 5 ಡಿಸೆಂಬರ್ 2025, 6:26 IST
ಗಜೇಂದ್ರಗಡ ಸಮೀಪದ ಕಾಲಕಾಲೇಶ್ವರ ದೇವಸ್ಥಾನದಲ್ಲಿ ಕಾರ್ತಿಕೋತ್ಸವ ವಿಜೃಂಭಣೆಯಿಂದ ನಡೆಯಿತು
ಗಜೇಂದ್ರಗಡ ಸಮೀಪದ ಕಾಲಕಾಲೇಶ್ವರ ದೇವಸ್ಥಾನದಲ್ಲಿ ಕಾರ್ತಿಕೋತ್ಸವ ವಿಜೃಂಭಣೆಯಿಂದ ನಡೆಯಿತು   

ಗಜೇಂದ್ರಗಡ: ದಕ್ಷಿಣ ಕಾಶಿ ಎಂದು ಪ್ರಸಿದ್ಧಿ ಪಡೆದಿರುವ ಕಾಲಕಾಲೇಶ್ವರನ ಕಾರ್ತಿಕೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು.

ಬೆಳಿಗ್ಗೆ ಕಾಲಕಾಲೇಶ್ವರನಿಗೆ ರುದ್ರಾಭಿಷೇಕ, ಅಲಂಕಾರ ಪೂಜೆ ಸೇರಿದಂತೆ ವಿಶೇಷ ಪೂಜೆ ಹಾಗೂ ಪಲ್ಲಕ್ಕಿ ಸೇವೆ ನಡೆಯಿತು. ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಇಲ್ಲಿನ ಎರಡು ಕಲ್ಲಿನ ದೀಪಸ್ತಂಭಗಳ ಮೇಲೆ ಎಣ್ಣೆಯಲ್ಲಿ ನೆನೆಸಿದ ಹತ್ತಿಕಾಳಿನಿಂದ ತಯಾರಿಸಿದ ಗಂಟುಗಳನ್ನು ಉರಿಸಿ ಭಕ್ತರು ಭಕ್ತಿ ಸಮರ್ಪಿಸಿದರು. ದೇವಸ್ಥಾನದ ಆವರಣದಲ್ಲಿ ದೀಪಗಳನ್ನು ಬೆಳಗಿಸಿದರು.

ದೇವಸ್ಥಾನದಲ್ಲಿ ಬಣ್ಣ ಬಣ್ಣದ ವಿದ್ಯುತ್ ದೀಪಗಳನ್ನು ಅಳವಡಿಸಿದ್ದರಿಂದ ಆಕರ್ಷಣಿಯವಾಗಿತ್ತು. ಸುತ್ತಲಿನ ಊರುಗಳಿಂದ ಸಾವಿರಾರು ಭಕ್ತರು ಆಗಮಿಸಿ ಕಾರ್ತಿಕದೀಪ ಹಚ್ಚಿ ದೇವರ ದರ್ಶನ ಪಡೆದುಕೊಂಡರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.