ಗಜೇಂದ್ರಗಡ: ‘ಪಟ್ಟಣದ ಸ್ವಚ್ಛತೆಗೆ ಶ್ರಮಿಸುವುದರ ಮೂಲಕ ಸಾರ್ವಜನಿಕರ ಆರೋಗ್ಯ ರಕ್ಷಿಸುತ್ತಿರುವ ಪೌರಕಾರ್ಮಿಕರ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ತಾಲ್ಲೂಕು ಆಡಳಿತ ವತಿಯಿಂದ ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು’ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಪಟ್ಟಣದ ಪುರಸಭೆ ಸ್ವಚ್ಚ ಸರ್ವೇಕ್ಷಣೆ ಸಮೀಕ್ಷೆಯಲ್ಲಿ ಜಿಲ್ಲೆಗೆ 2ನೇ ಹಾಗೂ ರಾಜ್ಯಕ್ಕೆ 57ನೇ ಸ್ಥಾನ ಪಡೆದ ಅಂಗವಾಗಿ ಪುರಸಭೆ ಆವರಣದಲ್ಲಿ ಮಂಗಳವಾರ ನಡೆದ ಪೌರ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಸ್ವಚ್ಛ ಪಟ್ಟಣ ಪ್ರತಿ ನಾಗರಿಕರ ಹಾಗೂ ಆಡಳಿತದ ಆಶಯವಾಗಿದೆ. ಸ್ವಚ್ಛ ಸರ್ವೇಕ್ಷಣೆ ಸಮೀಕ್ಷೆಯಲ್ಲಿ 2ನೇ ಸ್ಥಾನ ಬರಲು ಕಾರಣರಾದ ಪುರಸಭೆ ಪೌರ ಕಾರ್ಮಿಕರ ಕಾರ್ಯ ಶ್ಲಾಘನೀಯ. ಸರ್ಕಾರ ಈಗಾಗಲೇ ಮೊದಲ ಹಂತದಲ್ಲಿ ಸಾವಿರಾರು ಪೌರ ಕಾರ್ಮಿಕರನ್ನು ಖಾಯಂಗೊಳಿಸಿದೆ. ಮುಂದಿನ ದಿನಗಳಲ್ಲಿ ಪೌರ ಕಾರ್ಮಿಕರ ಸರ್ವಾಂಗೀಣ ಅಭಿವೃದ್ಧಿ ಜೊತೆಗೆ ಅವರಿಗೆ ವಸತಿ ಕಲ್ಪಿಸಲು ತಾಲ್ಲೂಕು ಆಡಳಿತ ಬದ್ಧವಾಗಿದೆ’ ಎಂದರು.
ಪುರಸಭೆಯ 40ಕ್ಕೂ ಅಧಿಕ ಪೌರ ಕಾರ್ಮಿಕರನ್ನು ಶಾಸಕ ಜಿ.ಎಸ್. ಪಾಟೀಲ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಸುಭಾಸ ಮ್ಯಾಗೇರಿ, ಉಪಾಧ್ಯಕ್ಷೆ ಸವಿತಾ ಬಿದರಳ್ಳಿ, ಸ್ಥಾಯಿ ಸಮಿತಿ ಅಧ್ಯಕ್ಷ ಮುದಿಯಪ್ಪ ಮುಧೋಳ, ಸದಸ್ಯರಾದ ಶಿವರಾಜ ಘೋರ್ಪಡೆ, ಮುರ್ತುಜಾ ಡಾಲಾಯತ, ರಾಜು ಸಾಂಗ್ಲೀಕರ, ವೆಂಕಟೇಶ ಮುದಗಲ್, ಮುಖ್ಯಾಧಿಕಾರಿ ಬಸವರಾಜ ಬಳಗಾನೂರ, ಮುಖಂಡರಾದ ಸಿದ್ದಣ್ಣ ಬಂಡಿ, ಯಲ್ಪಪ್ಪ ಬಂಕದ, ಶರಣಪ್ಪ ಚಳಗೇರಿ, ಸಿದ್ದಪ್ಪ ಚೋಳಿನ, ಶ್ರೀಧರ ಬಿದರಳ್ಳಿ, ದುರಗಪ್ಪ ಮುಧೋಳ, ಶ್ರೀಕಾಂತ ಅವಧೂತ, ಗುಲಾಂ ಹುನಗುಂದ, ಸಿದ್ದು ಗೊಂಗಡಶೆಟ್ಟಿಮಠ, ಪ್ರಕಾಶ ರಾಠೋಡ ಇದ್ದರು.
ಸ್ವಚ್ಚ ಸರ್ವೇಕ್ಷಣೆ ಸಮೀಕ್ಷೆ: ಜಿಲ್ಲೆಗೆ 57ನೇ ಸ್ಥಾನ 40ಕ್ಕೂ ಅಧಿಕ ಪೌರಕಾರ್ಮಿಕರಿಗೆ ಸನ್ಮಾನ ವಸತಿ ಸೌಲಭ್ಯ: ತಾಲ್ಲೂಕು ಆಡಳಿತ ಬದ್ಧ
ಸರ್ಕಾರ ಈಗಾಗಲೇ ಅನೇಕ ಪೌರ ಕಾರ್ಮಿಕರನ್ನು ಖಾಯಂ ಗೊಳಿಸಿದೆ. ಮುಂದಿನ ದಿನಗಳಲ್ಲಿ ಕಾರ್ಮಿಕರ ಅಭಿವೃದ್ಧಿ ಹಾಗೂ ವಸತಿ ಸೌಲಭ್ಯ ಕಲ್ಪಿಸಲು ತಾಲ್ಲೂಕು ಆಡಳಿತ ಬದ್ದವಾಗಿದೆ
-ಜಿ.ಎಸ್. ಪಾಟೀಲ ಶಾಸಕರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.