
ಎಫ್‌ಐಆರ್
ಗದಗ: ಗದಗ ಶಹರ, ಗ್ರಾಮೀಣ ಸೇರಿದಂತೆ ಜಿಲ್ಲೆಯ 12 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ಜೂಜಾಟ ಆಡುತ್ತಿದ್ದ 463 ಮಂದಿ ಮೇಲೆ 61 ಪ್ರಕರಣಗಳನ್ನು ದಾಖಲಿಸಿ, ₹5.15 ಲಕ್ಷ ಹಣ ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ತಿಳಿಸಿದ್ದಾರೆ.
ಅ.20ರಿಂದ 22ರ ವರೆಗೆ ಜಿಲ್ಲೆಯಾದ್ಯಂತ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಗದಗ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ 8 ಪ್ರಕರಣ ದಾಖಲಿಸಿ, ₹2.03 ಲಕ್ಷ ವಶಕ್ಕೆ ಪಡೆಯಲಾಗಿದೆ. 93 ಮಂದಿ ಮೇಲೆ ಪ್ರಕರಣ ದಾಖಲಿಸಲಾಗಿದೆ. ಗದಗ ಶಹರ ಠಾಣೆ ವ್ಯಾಪ್ತಿಯಲ್ಲಿ 6 ಪ್ರಕರಣ ದಾಖಲಿಸಿ, ₹31 ಸಾವಿರ ವಶಕ್ಕೆ ಪಡೆಯಲಾಗಿದೆ.
ಅದೇರೀತಿ, ಶಿರಹಟ್ಟಿ ತಾಲ್ಲೂಕಿನಲ್ಲಿ 12 ಪ್ರಕರಣಗಳಲ್ಲಿ ₹54 ಸಾವಿರ ವಶಕ್ಕೆ ಪಡೆದು 86 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಲಕ್ಷ್ಮೇಶ್ವರ ಠಾಣೆ ವ್ಯಾಪ್ತಿಯಲ್ಲಿ 5, ರೋಣ ಠಾಣೆ ವ್ಯಾಪ್ತಿಯಲ್ಲಿ 6, ಗಜೇಂದ್ರಗಡ 5, ಬೆಟಗೇರಿ ಬಡಾವಣೆ 3, ಬೆಟಗೇರಿ 6, ಮುಳಗುಂದ 4, ನರೇಗಲ್ 3, ಮುಂಡರಗಿ 2 ಹಾಗೂ ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 1 ಪ್ರಕರಣ ದಾಖಲಿಸಿ, ಹಣ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.