
ಪ್ರಜಾವಾಣಿ ವಾರ್ತೆ
ಗದಗ: ‘ಸರ್ಕಾರದ ಭರವಸೆಯಂತೆ ಪಿಂಚಣಿ ಯೋಜನೆ ಜಾರಿ ಹಾಗೂ ಅನುದಾನಿತ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಡಿ.17ರಂದು ಅಖಿಲ ಕರ್ನಾಟಕ ಹಾಗೂ ಪಿಂಚಣಿ ವಂಚಿತ ರಾಜ್ಯ ಅನುದಾನಿತ ಶಾಲಾ ಕಾಲೇಜು ನೌಕರರ ಸಂಘದಿಂದ ಹೋರಾಟ ನಡೆಸಲಾಗುವುದು’ ಎಂದು ಸಂಘಟನೆ ಜಿಲ್ಲಾ ಅಧ್ಯಕ್ಷ ಬಸವರಾಜ ಎಚ್. ಕೊರ್ಲಹಳ್ಳಿ ಹೇಳಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ‘ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಹಳೆಯ ಪಿಂಚಣಿ ಜಾರಿ ಸೇರಿದಂತೆ ಅನುದಾನಿತ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹೋರಾಟ ನಡೆಸಲು ರಾಜ್ಯ ಘಟಕ ತೀರ್ಮಾನಿಸಿದೆ. ಸಂಘಟನೆಯ ಎಲ್ಲ ಪದಾಧಿಕಾರಿಗಳು, ಸದಸ್ಯರು ಹೋರಾಟದಲ್ಲಿ ಭಾಗವಹಿಸುವರು.