ADVERTISEMENT

ಸರ್ಕಾರಿ ಯೋಜನೆ ಸಮರ್ಪಕ ಅನುಷ್ಠಾನಗೊಳ್ಳಲಿ: ಚೇತನಾ ಪಾಟೀಲ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2025, 2:27 IST
Last Updated 18 ಡಿಸೆಂಬರ್ 2025, 2:27 IST
ಮುಂಡರಗಿ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆ ಬುಧವಾರ ನಡೆಯಿತು
ಮುಂಡರಗಿ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆ ಬುಧವಾರ ನಡೆಯಿತು   

ಮುಂಡರಗಿ: ‘ಸರ್ಕಾರ ಯೋಜನೆಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಾರ್ವಜನಿಕರಿಗೆ ತಲುಪಿಸಬೇಕು. ಕಾಲಮಿತಿಯೊಳಗೆ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು’ ಎಂದು ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಸೂಚಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ತಾಲ್ಲೂಕು ಮಟ್ಟದ ಪ್ರತಿಯೊಂದು ಸಭೆಗೆ ಎಲ್ಲ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಇಲಾಖೆ ಜಾರಿಗೊಳಿಸಿದ ವಿವಿಧ ಯೋಜನೆ, ಅನುದಾನ ಕುರಿತು ಸಮಗ್ರ ಮಾಹಿತಿ ನೀಡಬೇಕು’ ಎಂದು ತಿಳಿಸಿದರು.

‘ತಾಲ್ಲೂಕಿನ ಬರದೂರು ಗ್ರಾಮದ ಪ್ರೌಢ ಶಾಲಾ ಆವರಣದಲ್ಲಿ ಅಂಗನವಾಡಿ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರಕ್ಕೆ ಪ್ರತ್ಯೇಕವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕ ಮಹದೇವ ಇರಸನಾಳ ಅವರು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಹೆಸ್ಕಾಂ ಅಧಿಕಾರಿಗಳು, ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ADVERTISEMENT

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯಕುಮಾರ ಎಲಿವಾಳ, ಹಿಂದುಳಿದ ವರ್ಗಗಳ ಇಲಾಖೆ ಎಸ್.ವಿ.ಕಲ್ಮಠ ಅವರು ಸರ್ಕಾರಿ ವಸತಿ ನಿಲಯಗಳ ನಿರ್ವಹಣೆ, ಸಿಬ್ಬಂದಿ, ಅನುದಾನ ಹಂಚಿಕೆ ಮೊದಲಾದವುಗಳ ಮಾಹಿತಿ ನೀಡಿದರು.

ವಲಯ ಅರಣ್ಯ ಅಧಿಕಾರಿ ಮಂಜುನಾಥ ಮೇಗಲಮನಿ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಬಸವರಾಜ ಮುಂದಿನಮನಿ, ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮಂಜುನಾಥ ಕಲಬುರ್ಗಿ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಎಂ. ತಾಂಬೂಟಿ. ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ಅಣ್ಣಿಗೇರಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಪ್ರಾಣೇಶ, ಅರಣ್ಯ ಇಲಾಖೆ ಅಧಿಕಾರಿ ಲಲಿತಾ ಪೂಜಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.