ADVERTISEMENT

ಗದಗ | ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಕಲ್ಪಿಸಿ: ಯಲ್ಲಪ್ಪ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2025, 6:20 IST
Last Updated 8 ಅಕ್ಟೋಬರ್ 2025, 6:20 IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜನಸಾಮಾನ್ಯರ ವೇದಿಕೆ ವತಿಯಿಂದ ಗದಗ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜನಸಾಮಾನ್ಯರ ವೇದಿಕೆ ವತಿಯಿಂದ ಗದಗ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು   

ಗದಗ: ‘ರಾಜ್ಯದ ಪ್ರತಿಯೊಂದು ಸರ್ಕಾರಿ ಶಾಲೆಗೆ ಮೂಲಸೌಕರ್ಯ ಒದಗಿಸಬೇಕು. ಪೂರ್ಣ ಪ್ರಮಾಣದ ವಿಷಯವಾರು ಶಿಕ್ಷಕರನ್ನು ನೇಮಕ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೀದರ್‌ನಿಂದ ಬೆಂಗಳೂರಿನವರೆಗೆ ಯುವ ಪರಿವರ್ತನಾ ಯಾತ್ರೆ ಹಮ್ಮಿಕೊಳ್ಳಲಾಗಿದೆ’ ಎಂದು ಜನಸಾಮಾನ್ಯರ ವೇದಿಕೆಯ ರಾಜ್ಯ ಸಂಚಾಲಕ ಯಲ್ಲಪ್ಪ ಹೆಗಡೆ ತಿಳಿಸಿದರು.

ರಾಜ್ಯದಲ್ಲಿ ಆರೋಗ್ಯ, ಶಿಕ್ಷಣ, ಕೃಷಿ, ಉದ್ಯೋಗ, ಸಬಲೀಕರಣ ಮುಂತಾದ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜನಸಾಮಾನ್ಯರ ವೇದಿಕೆಯು ಬೀದರ್‌ನಿಂದ ಬೆಂಗಳೂರಿನವರೆಗೆ ಹಮ್ಮಿಕೊಂಡಿರುವ ಯುವ ಪರಿವರ್ತನಾ ಯಾತ್ರೆ ಮಂಗಳವಾರ ಗದಗ ನಗರ ಪ್ರವೇಶಿಸಿದ ಸಂದರ್ಭದಲ್ಲಿ ಅವರು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿದರು.

‘ಕೆಪಿಎಸ್‌ಸಿ ಮತ್ತು ಇಲಾಖಾ ನೇಮಕಾತಿ ಪ್ರಾಧಿಕಾರಗಳು ಸಕಾಲಿಕ ನೇಮಕಾತಿ ಕ್ಯಾಲೆಂಡರ್‌ ಪ್ರಕಟಿಸಿ, ಪ್ರತಿ ಹಂತಗಳ ನಿಗದಿತ ವೇಳಾಪಟ್ಟಿಯನ್ನು ಮುಂದೂಡದೆ ಭ್ರಷ್ಟಾಚಾರ ಮುಕ್ತ ನೇಮಕಾತಿ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಖಾಸಗಿ ಕೈಗಾರಿಕೆಗಳಲ್ಲಿ ಉದ್ಯೋಗ ಮೀಸಲಾತಿ ಮತ್ತು ಎಲ್ಲಾ ಹುದ್ದೆಗಳಲ್ಲಿ ಸ್ಥಳೀಯರಿಗೆ ಪ್ರಾಮುಖ್ಯತೆ ಕಲ್ಪಿಸಬೇಕು. ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಇಲಾಖಾವಾರು ವಾರ್ಷಿಕ ನೇಮಕಾತಿ ಕ್ಯಾಲೆಂಡರ್‌ ಪ್ರಕಟಿಸಬೇಕು. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮಲ್ಟಿ ಸ್ಪೆಶಾಲಿಟಿ ಸೌಲಭ್ಯವುಳ್ಳ ಆಸ್ಪತ್ರೆಗಳ ನಿರ್ಮಾಣ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಸುಸಜ್ಜಿತ ಆಸ್ಪತ್ರೆಗಳ ನಿರ್ಮಾಣ ಮಾಡಬೇಕು’ ಎಂದು ಆಗ್ರಹಿಸಿದರು.

‘ರೈತರ ಪಂಪ್‌ ಸೆಟ್‍ಗಳಿಗೆ ಉಚಿತವಾಗಿ ವಿದ್ಯುತ್ ಸಂಪರ್ಕ ನೀಡಬೇಕು. ಕೃಷಿ ಉತ್ಪನ್ನಗಳಿಗೆ ಸರ್ವ ಋತುಗಳಲ್ಲಿ ಖಾತ್ರಿ ಬೆಲೆಯನ್ನು ಒದಗಿಸುವುದು. ಬಡ ರೈತರಿಗೆ (5 ಎಕರೆವರೆಗೆ) ಸರ್ಕಾರದಿಂದ ಉಚಿತವಾಗಿ ಪ್ರಮಾಣಿತ ಮತ್ತು ಪರೀಕ್ಷಿತ ಗುಣಮಟ್ಟದ ಬೆಳೆ ಆಧಾರಿತ ಬೀಜದ ಕಿಟ್‍ಗಳನ್ನು ಬಿತ್ತನೆಯ ಸಕಾಲದಲ್ಲಿ ಒದಗಿಸುವುದು. ಎಲ್ಲಾ ಜಿಲ್ಲೆಗಳಲ್ಲಿ ಕೃಷಿ ವಿಶ್ವವಿದ್ಯಾಲಯ ಹಾಗೂ ಸಂಸ್ಕರಣಾ ಘಟಕಗಳನ್ನು ನಿರ್ಮಿಸಿ, ಗ್ರಾಮೀಣ ಪ್ರದೇಶದಲ್ಲಿ ಕೃಷಿ ಉತ್ಪನ್ನಗಳಿಂದ ಆಹಾರ ತಯಾರಿಕಾ ತರಬೇತಿ ನೀಡಿ, ಮಾರುಕಟ್ಟೆಯಲ್ಲಿ ಬೆಂಬಲ ಬೆಲೆ ಒದಗಿಸಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಿದರು.

‘ಉತ್ತರ ಕರ್ನಾಟಕ ಭಾಗಕ್ಕೆ ಅಗತ್ಯ ರೈಲುಗಳ ಸಂಪರ್ಕ ಕಲ್ಪಿಸಿ, ಉತ್ತಮ ಗುಣಮಟ್ಟದ ಬಸ್‌ಗಳನ್ನು ಒದಗಿಸುವ ಮೂಲಕ ಗ್ರಾಮೀಣರಿಗೆ ಶಿಕ್ಷಣ, ತಂತ್ರಜ್ಞಾನ ಹಾಗೂ ಮಾರುಕಟ್ಟೆಗಳಿಗೆ ಹತ್ತಿರವಾಗುವಂತೆ ವ್ಯವಸ್ಥೆ ಮಾಡಬೇಕು’ ಎಂದರು.

ಹಾಲುಮತ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ರುದ್ರಣ್ಣ ಗುಳಗುಳಿ, ವೆಂಕಟೇಶ ಕುಲಕರ್ಣಿ ಸೇರಿದಂತೆ ಹಲವು ಮುಖಂಡರು ಇದ್ದರು. 

ಈಗಾಗಲೇ ಮೀಸಲಾತಿ ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಎಸ್.ಸಿ./ಎಸ್.ಟಿ. ಮತ್ತು 2ಎ ವರ್ಗಕ್ಕೆ ನೀಡಲಾಗಿದೆ. ಸಮಗ್ರ ಅನುಷ್ಠಾನಕ್ಕೆ ಕಾಮಗಾರಿಯಲ್ಲಿ ಕೆಲಸಗಳ ಮತ್ತು ಸೇವಾ ಕಾರ್ಯಗಳನ್ನು ವಿಲೀನಗೊಳಿಸಿ ದೊಡ್ಡ ಪ್ಯಾಕೆಜಿಂಗ್ ಮಾಡಿ ಮೀಸಲಾತಿ ತಪ್ಪಿಸುವ ಕೆಲಸ ನಡೆದಿದ್ದು, ಎಲ್ಲ ಇಲಾಖೆಗಳಲ್ಲಿ ಟೆಂಡರ ಕರೆಯುವುದು ನಿಯಮ ಉಲ್ಲಂಘನೆ ಮತ್ತು ಮೀಸಲಾತಿ ವರ್ಗಕ್ಕೆ ಅನ್ಯಾಯವಾಗದಂತೆ ಸರಿಪಡಿಸಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.