ಗದಗ: ‘ಪ್ರಧಾನಿ ನರೇಂದ್ರ ಮೋದಿ ಅಭಿನವ ಬಸವಣ್ಣ ಇದ್ದಂತೆ’ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
‘12ನೇ ಶತಮಾನದಲ್ಲಿ ಮಹಿಳಾ ಸಮಾನತೆಗಾಗಿ ಬಸವಣ್ಣ ಹೋರಾಡಿದ್ದರು. ಈಗ ಪ್ರಧಾನಿ ದಿಟ್ಟ ಹೆಜ್ಜೆ ಇರಿಸಿದ್ದಾರೆ. 2028ರ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿಗೆ ಕಾನೂನು ಬರಲಿದೆ. ಮಹಿಳೆಯರಿಗೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ಸಿಗಲಿದೆ’ ಎಂದು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.
‘ಮಹಿಳಾ ಮೀಸಲಾತಿ ಜಾರಿಗಾಗಿಯೇ ಕೇಂದ್ರ ಸರ್ಕಾರ ಜನಗಣತಿ, ಜಾತಿಗಣತಿಗೆ ನಿರ್ಧರಿಸಿದೆ. 2028ಕ್ಕೂ ಮುನ್ನ ಮಧ್ಯಂತರ ಚುನಾವಣೆ ನಡೆದರೆ ಈ ಕಾನೂನು ಅನ್ವಯಿಸುವುದಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.